ಬೆಂಗಳೂರು : ಅಂತರರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಸಮಯ ನೀಡಿದರೆ ಪ್ರಧಾನಿ ಅವರನ್ನು ಭೇಟಿ ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಹಾಗೆಯೇ, ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.




