HEAVY RAIN IN TAMILNADU: ತಮಿಳುನಾಡಿನಲ್ಲಿ ಭಾರೀ ಮಳೆ : ಶಾಲೆಗಳಿಗೆ ರಜೆ: ನಾಲ್ಕು ಜಿಲ್ಲೆಗಳಲ್ಲಿ ಹೈಅಲರ್ಟ್

ಚೆನ್ನೈ: ಕಳೆದ ಒಂದು ವಾರದ ಹಿಂದೆಯಷ್ಟೇ ಮಿಚಾಂಗ್ ಚಂಡಮಾರುತದ ಆರ್ಭಟಕ್ಕೆ ತಮಿಳುನಾಡು ತ್ತತರಿಸಿತ್ತು. ಇದೀಗ ಮತ್ತೆ ನಿನ್ನೆ ರಾತ್ರಿ ಧಾರಾಕಾರ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್ ಅನ್ನು ಘೋಷಿಸಲಾಗಿದೆ.


ತಮಿಳುನಾಡಿನ ತೂತುಕುಡಿ, ಕನ್ಯಾಕುಮಾರಿ ಮುಂತಾದ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಶಾಲಾ, ಕಾಲೇಜುಗಳಿಗೆ, ಖಾಸಗಿ ಸಂಸ್ಥೆಗಳಿಗೆ ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಹಲವು ರೈಲು ಮತ್ತು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ.

ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ನೀಡಿದ್ದು, ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ನೆರೆ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಕನ್ಯಾಕುಮಾರಿ, ತೂತುಕುಡಿ ಮತ್ತು ತೆಂಕಾಸಿಗಳಲ್ಲಿ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

More News