ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಇಂದು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2006 ರಿಂದ 2011 ರ ಅವಧಿಯಲ್ಲಿ ಪೊನ್ಮುಡಿ ಅವರು ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದಾಗ ಅವರ ಹೆಸರಿನಲ್ಲಿ ಮತ್ತು ಪತ್ನಿಯ ಹೆಸರಿನಲ್ಲಿ ಸುಮಾರು ಶೇಕಡಾ 65.99 ಕ್ಕೂ ಮೀರಿ ಹೆಚ್ಚಿನ ಆದಾಯ ಗಳಿಸಿದ್ದರು. ಈ ಪ್ರಕರಣದಲ್ಲಿ ಪೊನ್ಮುಡಿ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ಅವರಿಗೆ ಮತ್ತು ಅವರ ಪತ್ನಿಗೆ ತಲಾ 50 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.

ಮದ್ರಾಸ್ ಕೈಹೋರ್ಟ್ ಡಿಎಂಕೆ ನಾಯಕ ಪೊನ್ಮುಡಿ ಮತ್ತು ಅಲವರ ಪತ್ನಿ 1.75 ಕೋಟಿ ರೂಪಾಯಿ ಅಕ್ರಮ ಆಸ್ತಿ ಪ್ರಕರಣದಲ್ಲಿ ದೋಷಿಗಳು ಎಂದು ಎರಡು ದಿನಗಳ ಹಿಂದೆ ತೀರ್ಪು ನೀಡಿತ್ತು. ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿತು.
ಈ ಆದೇಶದಿಂದ ತಮಿಳುನಾಡು ಸಿಎಂ ಸ್ಟ್ಯಾಲಿನ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ ಎಂದು ವಿಶ್ಲೇಶಿಸಲಾಗುತ್ತದೆ.