ಬೆಂಗಳೂರು : ರಾಜ್ಯ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿರುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
ಈ ವಿಡಿಯೋ ಇದೀಗ ಸಾಕಷ್ಟು ವೈರಲ್ ಆಗಿದ್ದು, ಇದರ ನಡುವೆಯೇ ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್ ವಿರುದ್ಧ ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದ್ದು, ಮಜಾವಾದಿ ಸಿದ್ದರಾಮಯ್ಯ ಮತ್ತು ಅವರ ಆಪ್ತ ಜಮೀರ್ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ವ್ಯಂಗ್ಯವಾಡಿದೆ.
ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ @siddaramaiah ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು.@CMofKarnataka @Iam_KGovindaraj pic.twitter.com/2rcbIy9QgE
— B Z Zameer Ahmed Khan (@BZZameerAhmedK) December 21, 2023
ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ಬೆಂಗಳೂರಿಗೆ ವಾಪಾಸ್ಸಾಗಿದ್ದರು. ವಿಮಾನದಲ್ಲಿನ ಸಂತಸದ ಕ್ಷಣಗಳನ್ನು ಸಚಿವ ಜಮೀರ್ ಅಹಮದ್ ಖಾನ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು.
ಹಾಗೆಯೇ ಐಷಾರಾಮಿ ಚಾರ್ಟರ್ಡ್ ಫ್ಲೈಟ್ ನಲ್ಲಿ ಉದ್ದನೆಯ ಸೋಫಾದಲ್ಲಿ ಕ್ಯಾಮರಾಗೆ ಫೋಸ್ ನೀಡಿದ್ದಾರೆ. ಅದರಂತೆಯೇ ಅವರು ವಿಮಾನದಲ್ಲಿ ನಾನಾ ಭಂಗಿಯ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. ಇವರೊಂದಿಗೆ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಮ ಭೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾದ್ ಇದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ.@INCKarnataka ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ.
— BJP Karnataka (@BJP4Karnataka) December 21, 2023
ಆದರೆ, ಮಜವಾದಿ @siddaramaiah ಮತ್ತು ಅವರ ಅತ್ಯಾಪ್ತ @BZZameerAhmedK ಅವರ ಆಡಂಬರಕ್ಕೇನು ಕಡಿಮೆ ಇಲ್ಲ.
ಜನರ ತೆರಿಗೆ… https://t.co/1vb2xSIv6W

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿರುವ ಬಿಜೆಪಿ ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. @INCKarnataka ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ @siddaramaiah ಮತ್ತು ಅವರ ಅತ್ಯಾಪ್ತ @BZZameerAhmedK ಅವರ ಆಡಂಬರಕ್ಕೇನು ಕಡಿಮೆ ಇಲ್ಲ. ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ. #CongressFailsKarnataka ಎಂದು ಹ್ಯಾಷ್ ಟ್ಯಾಗ್ ಬಳಸಿ ಕಿಡಿಕಾರಿದೆ.




