ಮಂಡ್ಯ : ನಾವು ಮೊದಲಿನಿಂದಲೂ ಹಿಜಾಬ್ ಧರಿಸುತ್ತಿದ್ದೇವು, ಎಲ್ಲಾ ಧರ್ಮವೂ ಒಂದೇ, ಮನುಷ್ಯರ ರೀತಿ ಬದುಕು ಕಟ್ಟಿಕೊಳ್ಳೋಣ, ಧರ್ಮಗಳ ನಡುವೆ ಸಂಘರ್ಷ ಬೇಡ ಎಂದು ಮಂಡ್ಯದಲ್ಲಿ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.
ಹಿಜಾಬ್ ವಿವಾದ ವೇಳೆ ಹಿಜಾಬ್ ಲೇಡಿ ಎಂದು ಹೆಸರು ವಾಸಿಯಾಗಿದ್ದ ಮುಸ್ಕಾನ್, ಪಿಇಎಸ್ ಕಾಲೇಜಿನಲ್ಲಿ ಜೈ ಶ್ರೀರಾಮ್ ಘೋಷಣೆ ನಡುವೆ ಅಲ್ಲಾ ವು ಅಕ್ಟರ್ ಎಂದು ಕೂಗಿದ್ದ ಸಾಕಷ್ಟು ಸದ್ದು ಮಾಡಿದ್ದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮ್ಮೀರ್ ಅಹಮದ್, ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ನಮ್ಮ ಹಕ್ಕನ್ನು ವಾಪಸ್ಸು ಕೊಟ್ಟಿರೋದಕ್ಕೆ ಧನ್ಯವಾದ, ನಮ್ಮ ಸಂಸ್ಕೃತಿಯನ್ನು ಬೆಂಬಲಿಸಿದ್ದಾರೆ. ನಾವು ಅಣ್ಣ-ತಮ್ಮಂದರ ರೀತಿ ಕಾಲೇಜಿಗೆ ಹೋಗಿ ಓದುತ್ತಾ ಇದ್ದೋ. ಅದೇ ರೀತಿ ನಾವು ಹೋಗಬೇಕಿದೆ. ಹಿಜಾಬ್ ನಮ್ಮ ಸಂಸ್ಕೃತಿ ನಮ್ಮ ಹಕ್ಕು ಎಂದು ತಿಳಿಸಿದ್ದಾರೆ.
ಹಿಜಾಬ್ ಹಕ್ಕು ವಾಪಸ್ ಬರುತ್ತೆ ಎಂಬ ನಂಬಿಕೆ ಇದೆ. ಈಗ ಎಲ್ಲರೂ ಶಿಕ್ಷಣ ಪಡೆಯಬೇಕು. ಹಿಜಾಬ್ ಇದೆ ಎಲ್ಲರೂ ಬಂದು ಪರೀಕ್ಷೆ ಬರೆಯಿರಿ. ಹಿಜಾಬ್ ಎನ್ನೋದು ನಮ್ಮ ಧರ್ಮ. ಇದನ್ನು ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತರಾಗಿದ್ದರು ಎಂದರು.
ನಾನು ಸಹ ಒಂದು ವರ್ಷ ಕಾಲೇಜಿಗೆ ಹೋಗಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಮೇಲೆ ಈಗ ನಾನು ಪಿಇಎಸ್ ಕಾಲೇಜಿಗೆ ಹೋಗುತ್ತೇನೆ, ಎಲ್ಲರೂ ಈಗ ಬಂದು ಪರೀಕ್ಷೆ ಬರೆಯಿರಿ. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡಾ. ಅಣ್ಣ-ತಮ್ಮಂದಿರ ರೀತಿ ಇದ್ದೀವಿ. ಮುಂದೆಯೂ ಸಹ ಹಾಗೇಯೇ ಇರೋಣ ಎಂದು ಕರೆನೀಡಿದರು.




