Pratap Simha: ತುರ್ತು ಚಿಕಿತ್ಸಾ ಘಟಕಕ್ಕೆ ತಮ್ಮ ವಿಕ್ರಂ ಶಿಪ್ಟ್: ಮನೆಯವ್ರನ್ನೆಲ್ಲಾ ಅರೆಸ್ಟ್ ಮಾಡಿ ಎಂದು ಸಿಂಹ ಭಾವುಕ

ಸಂಸದ ಪ್ರತಾಪ್​ ಸಿಂಹ ಸಹೋದರ ವಿಕ್ರಂ ಸಿಂಹರನ್ನು ಮರ ಕಡಿದ ಆರೋಪಕ್ಕೆ ಸಂಬಂಧಿಸಿ ಅರೆಸ್ಟ್​ ಮಾಡಿದ ಬೆನ್ನಲ್ಲೇ ವಿಕ್ರಂ ಸಿಂಹಗೆ ಹೈ ಬಿಪಿ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇತ್ತ ತಮ್ಮನ ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ, ಭಾವುಕರಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಹೋದರನ ಬಂಧನ ಬಳಿಕ ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಮ್ಮ ಮನೆಯಲ್ಲಿ ವಯೋವೃದ್ಧ ತಾಯಿ ಇದ್ದಾರೆ. ಅವರನ್ನೂ‌ ಬಂಧಿಸಿ. ನನ್ನ ತಂಗಿ ಇದ್ದಾಳೆ. ಅವಳನ್ನೂ ಅರೆಸ್ಟ್ ಮಾಡಿ. ನಿಮ್ಮ ಕುಟುಂಬ ರಾಜಕಾರಣವೇ ಮುಂದುವರಿಯಲಿ. ಆದ್ರೆ ತಾಯಿ ಚಾಮುಂಡಿ, ಕಾವೇರಿ ತಾಯಿ ಬಿಡಲ್ಲ. ಮೈಸೂರು- ಕೊಡಗು ಜನರು ಬಿಡಲ್ಲ. ನೀವು ನನ್ನ ಜೀವನ ಮುಗಿಸಬಹುದಷ್ಟೇ ಸರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರನ್ನ ಉಲ್ಲೇಖಿಸಿ ಮಾತನಾಡಿದ್ದಾರೆ.

ಸಹೋದರನ ಬಂಧನ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಸಿದ್ದರಾಮಯ್ಯ ಅವರಲ್ಲಿ ಸಾಷ್ಟಾಂಗ ನಮಸ್ಕಾರಗಳು ಎನ್ನುವ ಮೂಲಕ ಸಂಸದ ಪ್ರತಾಪ್ ಸಿಂಹ ಮಾತನ್ನ ಪ್ರಾರಂಭಿಸಿದರು. ಸಿದ್ದರಾಮಯ್ಯ ಅವರು ತನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ, ತಮ್ಮ ಮಗನನ್ನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವ ಸಲುವಾಗಿ, ಯಾರನ್ನ ಬೇಕಾದರೂ ತುಳಿಯುತ್ತಾರೆ. ಇದನ್ನ ಸಿದ್ದರಾಮಯ್ಯ ಅವರಿಂದ ಕಲಿಯಬೇಕು. ಇಂತಹ ತಂದೆ ಎಲ್ಲರಿಗೂ ಸಿಗಲ್ಲ.ನೀವೊಬ್ಬ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ ಎಂದು ಕುಹಕವಾಗಿ ಮಾತನಾಡಿದ್ದಾರೆ.

ನಿಮ್ಮಂತಹ ತಂದೆ ಜಗತ್ತಿನಲ್ಲಿ ಯಾರಿಗೂ ಸಿಗಲ್ಲ. ಎಲ್ಲಾ ಮಕ್ಕಳಿಗೂ ನಿಮ್ಮಂತಹ ತಂದೆ ಸಿಗಲ್ಲ. ನಿಮ್ಮನ್ನ ಮೆಚ್ಚಲು ಎರಡು ಕಾರಣಗಳಿವೆ. ಪ್ರತಾಪಸಿಂಹ ಅಡ್ಡಿ‌ ಆಗಿದ್ದಾನೆ ಅಂತ ಮುಗಿಸಲು ಮುಂದಾಗಿದ್ದೀರಿ. ನಿಮ್ಮಂತಹ ತಂದೆ ಪ್ರಪಂಚದಲ್ಲೇ ಎಲ್ಲೂ ಸಿಗಲ್ಲ. ಎರಡನೇ ಕಾರಣ, ನೀವು ಬ್ರಿಲಿಯೆಂಟ್ ಪಾಲಿಟಿಷಿಯನ್. ಡಿ. 16 ರಂದು ಬೇಲೂರಿನ ಜಮೀನಿನ ವಿಚಾರಕ್ಕೆ ನನ್ನ ತಮ್ಮನ ಹೆಸರು ಎಳೆದು ತಂದ್ರಿ. ಮರವನ್ನ ಕಡಿದಿದ್ದಾರೆ‌ ಎಂದು ಎಫ್ ಐ ಆರ್ ಹಾಕಿದ್ರಿ, ಪ್ರಕರಣದಲ್ಲಿ‌ ಜಯಮ್ಮ, ರಾಜೇಶ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ರವಿ ಎಂಬವರು ಸಹಾಯ ಮಾಡಿದ್ರು ಆ ಮೂವರು ಪರಾರಿ ಆಗಿದ್ದಾರೆ. ಈವರಗೆ ಮೂವರನ್ನು ಹಿಡಿಯಲು ಆಗಿಲ್ಲ. ಎಲ್ಲಾ ಮರಗಳನ್ನ ಹಾಸನದ ಅರಣ್ಯ ಭವನದಲ್ಲಿ ಇರಿಸಿದ್ದೀರಿ. 24 ನೇ ತಾರೀಖಿನವರಗೆ ನೀವು ಅವರನ್ನ ಬಂಧಿಸಲು ಸಾಧ್ಯವಾಗಲಿಲ್ಲ. ಹನುಮ ಜಯಂತಿ‌ ಸಂದರ್ಭ ನಾನು ಒಂದು ‌ಹೇಳಿಕೆ ನೀಡಿದ್ದೆ. ಅದಾದ ಎರಡೇ ಗಂಟೆಯಲ್ಲಿ ಪ್ರತಾಪಸಿಂಹನ ತಮ್ಮ ಮರಗಳ್ಳತನ ಮಾಡಿದ ಅಂತ ಕಾಂಗ್ರೆಸ್ ನವರು ಪೋಸ್ಟ್ ಹಾಕಿದ್ರಿ. ಎಫ್ ಐ ಆರ್ ನಲ್ಲಿ ನನ್ನ ತಮ್ಮನ ಹೆಸರೇ ಇಲ್ಲ. ಆದರೂ ಆತನನ್ನ ಬಂಧಿಸುವ ಮೂಲಕ ಪ್ರತಾಪಸಿಂಹನನ್ನ ಮುಗಿಸುವ ಯತ್ನ ಮಾಡಿದ್ದೀರಿ. ನನ್ನ ತಮ್ಮ ತಲೆ ಮರೆಸಿಕೊಂಡಿದ್ದಾನಾ?. ಎರಡು‌ ದಿನ ಮೊದಲೇ ನನ್ನ ತಮ್ಮ ಅರಣ್ಯ ಇಲಾಖೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾನೆ. ಆತನ ವಿರುದ್ಧ ಎಫ್‌ಐ ಆರ್ ಆಗಿಲ್ಲ. ಆತ ತಲೆ ಮರೆಸಿಕೊಂಡಿರಲಿಲ್ಲ. ಯಾಕೆ‌ ದಾರಿ ತಪ್ಪಿಸುತ್ತಿದ್ದೀರಿ ಎಂದು ಗರಂ ಆದರು.

ನಿಮ್ಮ ರಾಜಕೀಯ ಭವಿಷ್ಯಕ್ಕಾಗಿ ಪ್ರತಾಪ ಸಿಂಹನನ್ನ ಎಲ್ಲಾ‌ ರೀತಿ ತುಳಿಯುವ ಪ್ರಯತ್ನ ಮಾಡ್ತೀರಿ. ನನ್ನ ಚಾರಿತ್ರ್ಯವಧೆ ಮಾಡ್ತೀರಿ. ನನ್ನ ಕುಟುಂಬದವರನ್ನ ಬೀದಿಗೆ ಎಳೆದು ತರುತ್ತಿದ್ದೀರಿ. ನಿನ್ನೆ ಮೂರು ಗಂಟೆಗೆ ಅರೆಸ್ಟ್ ಮಾಡಿದ್ದೀರಿ. ಆದರೆ ಈವರಗೆ ಯಾಕೆ‌ ಕೋರ್ಟಿಗೆ ಪ್ರೊಡ್ಯೂಸ್ ಮಾಡಿಲ್ಲ. ಪಿಸಿಎಫ್‌ಗೆ ಕರೆ ಮಾಡಿ‌ ಮಾತನಾಡುತ್ತಿದ್ದೀನಿ, ನಿಮ್ಮ ತಮ್ಮನಿಗೆ ತೊಂದರೆ ಕೊಡಲ್ಲ ಅಂತೀರಿ. ಇಷ್ಟೊತ್ತು ಯಾಕೆ ಇಟ್ಕೊಂಡಿದ್ದೀರಿ.ನನ್ನ ಮೇಲೆ‌ ಎರಡು‌ ಕ್ರಿಮಿನಲ್‌ ಕೇಸ್ ಹಾಕಿದ್ರಿ. ಅಡಿಷನಲ್‌ ಎಸ್ ಪಿ ಮೇಲೆ ಕಾರ್ ಹತ್ತಿಸಿದ್ರಿ ಅಂತ ಸುಳ್ ಕೇಸ್ ಹಾಕಿಸಿದ್ರಿ. ನಿಮ್ಮ ಮಗನನ್ನ ರಿಹ್ಯಾಬಿಲೇಟ್ ಮಾಡಲು ನನ್ನನ್ನ ಬಲಿ ಕೊಡ್ತಿದ್ದೀರಿ ಎಂದು ದೂರಿದ್ದಾರೆ.

More News