Rain Alert: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ವಿವಿಧೆಡೆ ಮುಂಜಾನೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇದ್ದು, ಚಳಿಯ ತೀವ್ರತೆಯನ್ನು ಹೆಚ್ಚಿಸಲಿದೆ. ಹಗಲು ವೇಳೆ ಒಣಹವೆ ಮುಂದುವರಿಯಲಿದೆ. ಜೊತೆಗೆ ಮುಂದಿನ ನಾಲ್ಕೈದು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ.. ?

ರಾಜ್ಯಗಳಲ್ಲಿ ದಟ್ಟ ಮಂಜು ಕವಿದಿದೆ. ಇದರೊಂದಿಗೆ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗಲಿದೆ. ಅಲ್ಲದೇ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಗದಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ
ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಇಂದು ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು
ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.

More News