ಬೆಂಗಳೂರು : ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಲು ಸಾಧ್ಯವಿಲ್ಲ, ಸಾಕಷ್ಟು ಕಾನೂನು ತೊಡಕುಗಳಿವೆ ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ಗಿಗಾರರೊಂದಿಗೆ ಮಾತನಾಡಿದ ಅವರು, ಖಾಯಂ ಮಾಡಲು ಉಮಾದೇವಿ ಪ್ರಕರಣ ಬಂದ ಮೇಲೆ ಸಾಕಷ್ಟು ತೊಡಕು ಎದುರಾಗಿವೆ, ನೇರವಾಗಿ ತಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಲ್ಲಿ ಹಲವು ಕೇಸ್ ಇವೆ, ಯಾವ ರಾಜ್ಯದಲ್ಲೂ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಕಾನೂನು ತೊಡಕುಗಳ ಬಗ್ಗೆ ವಿವರಿಸಿ, ಖಾಯಂ ಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಖಾಯಂಮಾಡಲು ಕಾನೂನಿನ ತೊಡಕಿದೆ, ಆದ್ರೆ ಕೆಲವರು ಖಾಯಂ ಮಾಡಲೇ ಬೇಕು ಅಂತಿದ್ದಾರೆ, ಆದ್ರೆ ನಾವು ತೀರ್ಮಾನ ಮಾಡಿದ್ರೆ ನ್ಯಾಯಾಲಯದಲ್ಲಿ ಸಮಸ್ಯೆಯಾಗುತ್ತದೆ, ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.