ಬೆಂಗಳೂರು : ಕೆಲವು ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ.
— CM of Karnataka (@CMofKarnataka) January 4, 2024
2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ… pic.twitter.com/0b3dDtzRYT
2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ ಅಷ್ಟೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Case registered on 4/12/2017 in Chikmagalur Rural PS
crime number 421/17 under section 143,447,427,298,504,153A, 295A,353,506,114,120B r/w 149 IPC and section 3 of Prevention of Damage to Public Property Act 1984
Complainant :PSI Gaviraj
Accused :14
Brief fact : accused tried to demolish the Bombay Ghori in ID peetha ( Datta peetha) & shouted slogans & obstructed police officials from discharging their duties
First proposal for Government sanction was sent on 19/3/2020
Prosecution permission from Government: 7/9/23
Chargesheet submitted: 24/10/23
CC number :1475/23 Court has issued summons to all accused for first appearance on 8/1/24

2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ. ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ ಎಂದು ವಿವರಿಸಿದ್ದಾರೆ.
ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. .