ಬೆಂಗಳೂರು : ಕಾಟೇರ ಸಿನೆಮಾದ ಭರ್ಜರಿ ಸಕ್ಸಸ್ ಖುಷಿಯಲ್ಲಿರುವ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದ್ದು, ಜೆಟ್ ಲಾಗ್ ಪಬ್ ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
ದರ್ಶನ್, ಅಭಿಷೇಕ್ ಅಂಬರೀಷ್ ಸೇರಿದಂತೆ ಒಟ್ಟು 8 ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್ ನೀಡಿದ್ದು. ನೋಟಿಸ್ ನೀಡಿ ಎರಡು ದಿನ ಕಳೆದರೂ ಯಾರೂ ವಿಚಾರಣೆಗೆ ಹಾಜರಾಗಿರಲಿಲ್ಲ.
ದುಬೈನಿಂದ ನಿನ್ನೆ ರಾತ್ರಿ ಬೆಂಗಳೂರಿಗೆ ಹಿಂದಿರುಗಿರುವ ನಟ ದರ್ಶನ್ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿಯಲ್ಲಿ ತನಿಖಾಧಿಕಾರಿಯ ಮುಂದೆ ದರ್ಶನ್ ಅವರ ಜತೆ ಇತರರು ಹಾಜರಾಗುವ ಸಾಧ್ಯತೆಗಳಿವೆ.
ನಾನು ಕೋಪ ಮಾಡಿಕೊಳ್ಳಲ್ಲ: ದರ್ಶನ್ ಟ್ವೀಟ್
ನಿನ್ನೆ ರಾತ್ರಿ ವಾಪಾಸ್ಸಾದ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಸಾಕಷ್ಟು ವೈರಲ್ ಆಗಿದೆ. ಹಾಗೆಯೇ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ ಎಂದು ದರ್ಶನ್ ಪೋಸ್ಟ್ ಮಾಡಿದ್ದಾರೆ.
#DarshanThoogudeepaSrinivas #KAATERA #FILM #SUCESS #THANKS




