CONGRESS GIVEN NOTICE TO KARTI CHIDAMBARAM: ರಾಹುಲ್ ಗಾಂಧಿಗಿಂತ ಮೋದಿ ಜನಪ್ರಿಯ: ಕಾರ್ತಿ ಚಿದಂಬರಂ ಹೇಳಿಕೆಗೆ ಕಾಂಗ್ರೆಸ್ ನೋಟಿಸ್

ಚೆನ್ನೈ : ಕಾಂಗ್ರೆಸ್ ನೀತಿಯ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ವಿವರಣೆ ನೀಡುವಂತೆ ತಮಿಳುನಾಡು ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಸಂಸದ ಕಾರ್ತಿ ಚಿದಂಬರಂ ಅವರಿಗೆ ನೋಟಿಸ್ ಜಾರಿ ಮಾಡಿದೆ.
ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಕಾಂಗ್ರೆಸ್ ನೀತಿಗಳ ವಿರುದ್ಧ ಹೇಳಿಕೆಗಳನ್ನು ನೀಡಿದ್ದರಿಂದ ನೋಟಿಸ್ ಜಾರಿಗೊಳಿಸಲಾಗಿದೆ ಎಂ ತಮಿಳುನಾಡು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಇತ್ತೀಚೆಗೆ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಅವರು ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗೆ ಸರಿಸಮಾನಾದ ನಾಯಕ ಎಂದು ಪರಿಗಣಿಸಲಾಗುವುದಿಲ್ಲ ಹಾಗೂ ನರೇಂದ್ರ ಮೋದಿ, ರಾಹುಲ್ ಗಾಂಧಿಗಿಂತ ಹೆಚ್ಚು ಜನಪ್ರಿಯ ಹೊಂದಿದ್ದಾರೆ ಎಂದು ಹೇಳಿದ್ದರು.

ಕೆಲವು ದಿನಗಳ ನಂತರ ಮತ್ತೊಂದು ಸುದ್ದಿವಾಹಿನಿಯ ಸಂದರ್ಶನದಲ್ಲಿ ಇವಿಎಂ ತಿರುಚಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ, ಇವಿಎಂಗಳನ್ನು ತಿರುಚುವ ಮೂಲಕ ಬಿಜೆಪಿ ಹಲವು ರಾಜ್ಯಗಳಲ್ಲಿ ಗೆಲ್ಲುತ್ತಿದೆ ಎಂದು ಅನೇಕ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಆದರೆ ಕಾರ್ತಿ ಚಿದಂಬರಂ ಅವರ ಹೇಳಿಕೆ ರಾಷ್ಟ್ರ ನಾಯಕರ ಹೇಳಿಕೆಗೆ ವ್ಯತಿರಿಕ್ತವಾಗಿತ್ತು.
ಈ ಎಲ್ಲಾ ಆರೋಪಗಳಿಗೆ ವಿವರಣೆ ನೀಡುವಂತೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

More News