TWO DAY’S RAIN IN STATE’S SOME PLACE: ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ

ಬೆಂಗಳೂರು : ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಅತಿಯಾದ ಚಳಿಯಿಂದ ಕಂಗೆಟ್ಟ ಜನಕ್ಕೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಕರ್ನಾಟಕದೆಲ್ಲೆಡೆ ಶೀತಗಾಳಿ ಬೀಸುತ್ತಿದೆ, ಅಲ್ಲಲ್ಲಿ ಅಕಾಲಿಕ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್ ನಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅಂದರೆ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲದೇ, ದಕ್ಷಿಣ ಕನ್ನಡ, ಹಾಸನ,ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಮಳೆ..?
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ,ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

More News