ಮುಂಬೈ : ಕಾಲಿವುಡ್ ಖ್ಯಾತ ನಟಿ ನಯನತಾರಾ ನಟನೆಯ ಅನ್ನಪೂರ್ಣಿ ಚಿತ್ರ ಇದೀಗ ಒಂದು ತಿಂಗಳ ವಿವಾದದ ಸುಳಿಯಲ್ಲಿ ಸಿಲುಕಿದೆ. ಚಿತ್ರ ಓಟಿಟಿಯಲ್ಲಿ ಬಿಡುಗಡೆಯಾದ ನಂತರ ಈ ವಿವಾದ ಎದ್ದಿದೆ. ಸಿನಿಮಾದ ಕೆಲವು ದೃಶ್ಯಗಳು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಪರ ಸಂಘಟನೆಗಳು ನಯನತಾರಾ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿವೆ.

ಚಿತ್ರದಲ್ಲಿ ಲವ್ ಬಿಹಾದ್ ಅನ್ನು ಪ್ರೋತ್ಸಾಹಿಸಲಾಗಿದೆ ಹಾಗೂ ಹಿಂದೂ ದೇವರು ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆದು ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ನ ಓಶಿವಾರ ಪೊಲೀಸ್ ಠಾಣೆಯಲ್ಲಿ ಬಜರಂಗದಳದ ಕಾರ್ಯಕರ್ತರು ದೂರು ನೀಡಿದ್ದಾರೆ.
ಹಾಗೆಯೇ ಹಿಂದೂ ಐಟಿ ಸೆಲ್ ನ ಸಂಸ್ಥಾಪಕ ರಮೇಶ್ ಸೋಲಂಕಿ ಎನ್ನುವವರು ದಕ್ಷಿಣ ಮುಂಬೈನ ಲೋಕಮಾನ್ಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರರು ಪೊಲೀಸರ ಮುಂದೆ ಹಾಜರಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಡುವಯೇ ಓಟಿಟಿಯಲ್ಲಿ ಚಿತ್ರ ಕಾಣೆಯಾಗಿದ್ದು, ಚಿತ್ರ ನಿರ್ಮಾಣ ಸಂಸ್ಥೆ ಜೀ5 ಸಂಬಂಧಪಟ್ಟವರಿಗೆ ಪತ್ರ ಬರೆದು ಕ್ಷಮೆ ಕೋರಿದೆ. ನಿಲೇಶ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಡಿಸೆಂಬರ್ 1 ರಂದು ಬಿಡುಗಡೆಯಾಗಿತ್ತು.




