ನವದಹೆಲಿ : ಪ್ರತಿಪಕ್ಷದ ನಾಯಕನಾಗಿ ಅಧಿಕಾರ ಸ್ವೀಕಾರ ಮಾಡಿ ಎರಡು ತಿಂಗಳ ನಂತರ ಇಂದು ಆರ್ ಅಶೋಕ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮೂಲಕ ಇನ್ನಷ್ಟು ಬಲಯುತವನ್ನಾಗಿ ಮಾಡುವುದು, ಹಾಗೂ ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಸೀಟುಗಳನ್ನು ಗೆಲ್ಲಿಸಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವುದುರ ಕುರಿತು ಚರ್ಚೆ ನಡೆಸಿದರು.
Met @BJP4India National President Shri @JPNadda Ji in New Delhi today and exchanged views on various aspects of strengthening the party in Karnataka.
— R. Ashoka (ಆರ್. ಅಶೋಕ) (@RAshokaBJP) January 15, 2024
Also sought his guidance to achieve thumping victory of NDA candidates in all 28 LS seats in the state and ensure a bigger… pic.twitter.com/NxyRTJfWKL
ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಅವರು ಫೋಟೋಗಳನ್ನು ಅಪ್ ಲೋಡ್ ಮಾಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲಿ ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಪ್ರಧಾನಿ ಶ್ರೀ @narendramodi ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಶ್ರೀ ನಡ್ಡಾ ಅವರ ಸಲಹೆ, ಮಾರ್ಗದರ್ಶನ ಪಡೆಯಲಾಯಿತು ಎಂದು ಬರೆದುಕೊಂಡಿದ್ದಾರೆ.
#JPNADDA #BJP4INDIA #BJP4KARNATAKA #RASHOK #OPPOSITIONPARTYLEADER #NARENDRAMODI #PRIMEMINISTER #MEETS #LOKASABHEELECTION




