ನಾಲ್ಕು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು : ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನಾಲ್ಕು ದಿನಗಳ ಭೇಟಿಗಾಗಿ ಇಂದು ಬೆಂಗಳೂರಿಗೆ ಆಗಮಿಸಿದರು. ಹೆಚ್. ಎ. ಎಲ್. ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ನಗರಭಿವೃದ್ಧಿ ಸಚಿವ ಭೈರತಿ ಬಸವರಾಜ್, ಡಿ.ಜಿ &ಐ.ಜಿ ಪಿ. ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

More News