JUSTICE B VEERAPPA COMMISSION SUBMITS REPORTS: ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾಯಮೂರ್ತಿ.ಬಿ ವೀರಪ್ಪ ಆಯೋಗ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿದ್ದಾಗ ನಡೆದಿದೆ ಎನ್ನಲಾದ ಪಿಎಸ್ಐ ಅಕ್ರಮ ನೇಮಕ ಹಗರಣ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಚಾರಣಾ ಆಯೋಗವು ಇಂದು ವರದಿ ಸಲ್ಲಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ ಬಿ.ವೀರಪ್ಪ ನೇತೃತ್ವದ ಆಯೋಗ. ಗೃಹ ಕಚೇರಿ ಕೃಷ್ಣಾದಲ್ಲಿ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದರು.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್ಐ ಅಕ್ರಮ‌ ನೇಮಕಾತಿ ಸಂಬಂಧ ನ್ಯಾಯಾಂಗ‌ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರ, ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರಕ್ಕೆ ಆಯೋಗ ವರದಿ ಸಲ್ಲಿಸಿದೆ.

More News

You cannot copy content of this page