ACTOR SAIF ALI KHAN: ನಟ ಸೈಫ್ ಆಲಿ ಖಾನ್ ಆಸ್ಪತ್ರೆಗೆ ದಾಖಲು: ಯಶಸ್ವಿ ಶಸ್ತ್ರಚಿಕಿತ್ಸೆ

ಮುಂಬೈ: ನಟ ಸೈಫ್ ಆಲಿ ಖಾನ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
ಇತ್ತೀಚೆಗೆ ಚಿತ್ರವೊಂದರ ಸಾಹಸ ದೃಶ್ಯ ಚಿತ್ರೀಕರಣ ಸಂದರ್ಭದಲ್ಲಿ ಸೈಫ್ ಸಾಕಷ್ಟು ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಹೀಗಾಗಿ ಅವರಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ, ಆಸ್ಪತ್ರೆಯಿಂದಲೇ ಅವರು ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಜೂನಿಯರ್ ಎನ್ ಟಿ ಆರ್ ನಟನೆಯ ದೇವರ ಚಿತ್ರದ ಚಿತ್ರೀಕರಣದ ವೇಳೆ ಸೈಫ್ ಅವರ ಮೊಣಕಾಲು ಮತ್ತು ಭುಜಕ್ಕೆ ಗಾಯವಾಗಿತ್ತು. ಹಾಗೆಯ್ ವಿಶಾಲ್ ಭಾರಧ್ವಾಜ್ ಅವರ ರಂಗೂನ್ ಚಿತ್ರದ ಶೂಟಿಂಗ್ ಸಂದರ್ಭದಲ್ಲೂ ಸೈಫ್ ಗಾಯಗೊಂಡಿದ್ದರು.
ಶೂಟಿಂಗ್ ಸಂದರ್ಭದಲ್ಲಿ ಅವರು ಕೆಲವೊಮ್ಮೆ ಕ್ರೇಪ್ ಬ್ಯಾಂಡೇಜ್ ಧರಿಸಿದ್ದರು. ಆದ್ದರಿಂದ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

More News