OLD PENSION SCHEME IMPLEMENTED STATE GOVERNMENT: ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ: 13 ಸಾವಿರ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ

ಬೆಂಗಳೂರು : ಸುಮಾರು 13,000 ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅವರ ಒತ್ತಾಸೆಯಂತೆ ಹಳೆ ಪಿಂಚಣಿ ಯೋಜನೆಯನ್ನೇ ಮನಂದುವರೆಸಲು ನಿರ್ಧರಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು, ಇದನ್ನು ತಮ್ಮ ಸಾಮಾಜಿಕ ಜಾರಿಗೊಳಿಸಿ ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಕೆ ನುಡಿದಂತೆ ನಡೆದಿದ್ದೇನೆ ಎಂದು ಹೇಳಿದ್ದಾರೆ.

ಅವರು ಮಾಡಿರುವ ಟ್ವೀಟ್ ನ ಸಂಪೂರ್ಣ ವಿವರ ಇಲ್ಲಿದೆ. 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ.
ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

More News