ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರ್ಪಡೆಗೊಂಡಿದೆ. ಯಾಕೆಂದರೆ ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಅವರ ಹೆಸರು ಲಿಮ್ಕಾ ಬುಕ್ ಆಫ್ ರೇಕಾರ್ಡ್ ಆಗಿದೆ.
ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಅವರು ಕಳೆದ 43 ವರ್ಷಗಳಿಂದ ಚುನಾಯಿತರಾಗಿ ವಿಧಾನ ಪರಿಷತ್ ನ ಸದಸ್ಯ(MLC) ಆಗಿದ್ದಾರೆ.
ಭಾರತದ ರಾಜಕಾರಣಕ್ಕೆ ಸಂಬಂಧಿಸಿದಂತೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯು ಧೀರ್ಘಾವಧಿಗೆ ಚುನಾಯಿತ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಮೂವರು ರಾಜಕಾರಣಿಗಳ ಹೆಸರುಗಳನ್ನು ಪ್ರಕರಟಿಸಿದೆ.
ಬಸವರಾಜ ಹೊರಟ್ಟಿ ಅವರು ಈ ಹಿಂದೆ ಜೆಡಿಎಸ್ ಪಕ್ಷದಿಂದ ಇದೀಗ ಕಳೆದ ಮೇ 10 ರಂದು ಬಿಜೆಪಿ ಸೇರಿದರೂ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದಲೂ ಆಯ್ಕೆಯಾಗುತ್ತಲೇ ಬಂದಿದ್ದಾರೆ. ಹೊರಟ್ಟಿ ಅವರು 1980 ರಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. 43 ವರ್ಷ 201 ದಿನಗಳ ಕಾಲ ಒಂದೇ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ.
ಹಾಗೆಯೇ ಪಶ್ಚಿಮ ಬಂಗಾಲದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರು 11 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಆದರೆ ವಿವಿಧ ಕ್ಷೇತ್ರಗಳಿಂದ ಅವರು ಆಯ್ಕೆಯಾಗಿದ್ದರು. ಆದರೆ ಹೊರಟ್ಟಿ ಅವರು ಇದುವರೆಗೂ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರು 24 ವರ್ಷ 165 ದಿನಗಳ ಕಾಲ ಆ ಹುದ್ದೆಯನ್ನು ಅಲಂಕರಿಸಿದ್ದಾರೆ. ಜ್ಯೋತಿ ಬಸು ಅವರು ಪಶ್ಚಿಮ ಬಂಗಾಲದ ಮುಖ್ಯಮಂತ್ರಿಯಾಗಿ 23 ವರ್ಷ 137 ದಿನಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ರೆಕಾರ್ಡ್ಸ್ ಬುಕ್ ನಲ್ಲಿ ಉಲ್ಲೇಖಿಸಲಾಗಿದೆ.




