ಬೆಂಗಳೂರು : ಚುನಾವಣೆಯಲ್ಲಿ ಸೋತರೂ ಅವರಿಗೆ ವಿಧಾನಪರಿಷತ್ ಸ್ಥಾನಮಾನ ನೀಡಿದ್ದ ಕಾಂಗ್ರೆಸ್ ಗೆ ಕೈ ಕೊಟ್ಟುಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಲಕ್ಷ್ಮಣ್ ಸವದಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆಸಿಕೊಂಡು ಮಹತ್ವದ ಮಾತುಕತೆ ನಡೆಸಿದರು.
ರ್ಕಾಂಗ್ರೆಸ ವಾರ್ ರೂಂ ನಲ್ಲಿ ಭೇಟಿ ಮಾಡಿ ಲಕ್ಷ್ಮಣ್ ಸವದಿ ಅವರೊಂದಿಗೆ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದರು. ಜಗದೀಶ್ ಶೆಟ್ಟರ್ ಬಳಿಕ ಲಕ್ಷ್ಮಣ್‌ಸವದಿ ಪಕ್ಷ ತೊರೆಯುತ್ತಾರೆಂಬ ಗುಮಾನಿ ಹಿನ್ನಲೆಯಲ್ಲಿ ಈ ಚರ್ಚೆ ನಡೆಸಿದರು.
ಲಕ್ಷ್ಮಣ್ ಸವದಿ ಅವರಿಗೆ ಸ್ಥಾನ ಮಾನ ನೀಡಲು ಆಈ ಹಿಂದೆ ಜಗದೀಶ್ ಶೆಟ್ಟರ್ ಅವರು ಅಡ್ಡಿಯಾಗಿದ್ದರು. ಇದೀಗ ಅವರಿಗೆ ಹಾದಿ ಸುಗಮವಾಗಿದ್ದು, ಶೀಘ್ರದಲ್ಲೇ ಉತ್ತಮ ಸ್ಥಾನಮಾನ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
ನನ್ನ ನಿಲುವು ಸ್ಪಷ್ಟವಾಗಿದೆ, ಕಾಂಗ್ರೆಸ್ ಬಿಡುವುದಿಲ್ಲ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ನನ್ನ ನಿಲುವು ಸ್ಪಷ್ಟವಾಗಿದೆ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಹೋಗೋದಿಲ್ಲ, ಇದನ್ನ ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದೇನೆ ಎಂದರು.
ಬಿಜೆಪಿಯವರಿಗೆ ನಮ್ಮ ಅನಿವಾರ್ಯತೆ ಇದೆ, ಹಾಗಾಗಿ ನಮ್ಮನ್ನು ಸಂಪರ್ಕಿಸುತ್ತಿದ್ದಾರೆ, ಗೊಂದಲ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಾನು, ಜಗದೀಶ್ ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿ ಕಾಂಗ್ರೆಸ್ ಗೆ ಬಂದಿರಲಿಲ್ಲ. ನಾನು ಮೊದಲು ಕಾಂಗ್ರೆಸ್ ಗೆ ಬಂದೆ, ನಂತರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಶೆಟ್ಟರ್ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈಗ ಯಾಕೆ ಬಿಜೆಪಿಗೆ ಹೋಗಿದ್ದಾರೆ ಅಂತ ಗೊತ್ತಿಲ್ಲ ಎಂದರು.
ನಾನು ಅವರು ಸ್ನೇಹಿತರು, ದಿನಾ ನಾವಿಬ್ಬರು ಮಾತಾನಾಡುತ್ತೇವೆ, ಆದರೆ ಅವರು ಈ ನಿರ್ಧಾರ ಮಾಡ್ತಾರೆ ಅಂತ ಗೊತ್ತಿರಲಿಲ್ಲ, ಲೋಕಸಭೆ ಚುನಾವಣೆ ಹಿನ್ನೆಲೆ ಅವರಿಗೆ ನಮ್ಮ ಅನಿರ್ವಾಯತೆ ಇದೆ, ಹಾಗಾಗಿ ಸಂಪರ್ಕ ಮಾಡ್ತಾ ಇದ್ದಾರೆ ಎಂದು ಬಿಜೆಪಿಯನ್ನು ಟೀಕಿಸಿದರು.
ಸಚಿವ ಸ್ಥಾನ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ಈಗ ಮಾತನಾಡೋದು ಸೂಕ್ತ ಅಲ್ಲ ಎಂದು ಹೇಳಿದ ಅವರು, ಪಕ್ಷ ಏನು ಹೇಳುತ್ತೋ ಅದನ್ನ ಮಾಡುತ್ತೇನೆ, ನಿನ್ನೆ ಸಿಎಂ ಅವರನ್ನು ಭೇಟಿ ಮಾಡಿದ್ದೆ, ಕ್ಷೇತ್ರದ ಅನುದಾನ ವಿಚಾರವಾಗಿ ಭೇಟಿಯಾಗಿದ್ದೆ, ಕೃಷಿ ಕಾಲೇಜಿನ ಬಗ್ಗೆ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಸಂಬಂಧ ಚರ್ಚಿಸಲು ಹೋಗಿದ್ದೆ, ಬೇರೆ ರಾಜಕೀಯ ಚರ್ಚೆ ಇಲ್ಲ ಎಂದು ಹೇಳಿದ ಅವರು, ದೆಹಲಿಗೆ ಹೋಗುವುದಾದರೆ ಹೇಳಿಯೇ ಹೋಗುತ್ತೇನೆ ಎಂದರು.




