DEFAMATION IS THE LAST WEAPON OF HELPLESS: ನನ್ನನ್ನು ರಾಜಕೀಯವಾಗಿ ಎದುರಿಸಲಾಗದೇ ಕಾರ್ಖಾನೆಗೆ ನೋಟೀಸ್: ಕೈಲಾಗದವನ ಕೊನೆಯ ಅಸ್ತ್ರವೇ ಅಪಪ್ರಚಾರ : ಶಾಸಕ ಯತ್ನಾಳ್

ಬೆಂಗಳೂರು : ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ, ಇದು ನನ್ನನ್ನು ರಾಜಕೀಯವಾಗಿ ಎದುರಿಸಲಾಗದೇ ಕಾರ್ಖಾನೆಗೆ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ನಿಯಂತ್ರಣ ಮಂಡಳಿ ನೋಟಿಸ್ ಜಾರಿಮಾಡಿದೆ. ಇದರಿಂದ ಕೋಪಗೊಂಡಿರುವ ಯತ್ನಾಳ್ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಸಿಟ್ಟನ್ನು ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅವರು ಈ ರೀತಿ ಮಾಹಿತಿ ಹಂಚಿಕೊಂಡಿದ್ದಾರೆ.

https://twitter.com/BasanagoudaBJP/status/1751100327829594425?s=20

ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗು ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ.
‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ.
ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

More News