CHIEF MINISTER REGRETS: ರಾಷ್ಟ್ರಪತಿಗಳಿಗೆ ಏಕವಚನ ಬಳಕೆ: ಅಚಾತುರ್ಯಕ್ಕೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ

ಬೆಂಗಳೂರು : ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.

ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ.
ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ.
ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.

More News

You cannot copy content of this page