ACTOR THALAPATHY VIJAY NEW POLITICAL PARTY: ನಟ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ: ತಮಿಳಗ ವೆಟ್ರಿ ಕಳಗಂ ಪಕ್ಷ ಸ್ಥಾಪನೆ

ಚೆನ್ನೈ : ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದು,. ತಮಿಳಗ ವೆಟ್ರಿ ಕಳಗಂ ಎಂಬ ಪಕ್ಷವನ್ನು ಹುಟ್ಟು ಹಾಕಿದ್ದಾರೆ.

ಕಳೆದ ವಾರ ಚೆನ್ನೈನಲ್ಲಿ ನಡೆದ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಇಂದು ಅವರು ತಮ್ಮ ನೂತವನ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.
ಪ್ರಕಟಣೆ ಮೂಲಕ ಈ ವಿಚಾರವನ್ನು ಸ್ಪಷ್ಟಪಡಿಸಿದ ನಟ ವಿಜಯ್, ನಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ ಅನ್ನು ನೊಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. 2026ರಲ್ಲಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರಂಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ತಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲ್ಲ ಎಂದು ತಿಳಿಸಿದ ಅವರು ಯಾವುದೇ ಬೇರೆ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ. ಈ ಪಕ್ಷ ಕೇವಲ ತಮಿಳುನಾಡಿಗೆ ಸೀಮಿತವಾಗದೇ ಕರ್ನಾಟಕದಲ್ಲೂ ಅವರ ಅಭಿಮಾನಿಗಳು ಇರುವುದರಿಂದ ಎಲ್ಲೆಡೆ ವಿಸ್ತಾರಗೊಳ್ಳಲಿದೆ ಎನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.

More News