CHANDRABABU NAIDU MEET BJP LEADRS: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ: ಅಮಿತ್ ಶಾ ಮತ್ತು ನಡ್ಡಾ ಭೇಟಿಯಾದ ಚಂದ್ರಬಾಬು ನಾಯ್ಡು

ನವದೆಹಲಿ : ತೆಲುಗು ದೇಶಂ ಪಕ್ಷ (TDP) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮುಂದಿನ ವಿಧಾನಸಭೆ ಚುನಾವಣೆ ಸಂಬಂಧ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮುಂಬರುವ ಕೆಲವೇ ದಿನಗಳಲ್ಲಿ ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲಕ್ಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಬಿಜೆಪಿ ಮುಖಂಡರೊಂದಿಗೆ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಾಯ್ಡು ಅವರು ಎನ್ ಡಿ ಎಯೊಂದಿಗೆ ಕೈ ಜೋಡಿಸಲಿದ್ದಾರೆ ಎಂಬ ಮಾತುಗಳು ಇದೀಗ ಆಂಧ್ರಪ್ರದೇಶದಲ್ಲಿ ಕೇಳಿಬರುತ್ತಿವೆ.
ಬಿಜೆಪಿಯೊಂದಿಗೆ ಕೈಜೋಡಿಸಲು ಚಂದ್ರಬಾಬು ನಾಯ್ಡು ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೈತ್ರಿ ಏರ್ಪಟ್ಟರೆ ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಪಡೆಯಬಹುದು ಎಂಬ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳಿದ್ದು, ಈ ಕುರಿತು ಉಭಯ ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

More News