ನವದೆಹಲಿ: ನಿನ್ನೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ ಮಾಡಿತ್ತು. ಇಂದು ಕೇರಳಾ ರಾಜ್ಯದ ಮುಖ್ಯಮಂತ್ರಿ ಮತ್ತು ಶಾಸಕರು, ಸಚಿವರು ಕೇಂಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಆಡಳಿತರೂಢ ಎಲ್ ಡಿ ಎಫ್ ಸರ್ಕಾರ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿತು.
ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸುತ್ತಿರುವ ಕೇರಳಾ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಸಚಿವರು ಮತ್ತು ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ಭಿತ್ತಿಪತ್ರ ಪರ್ದರ್ಶಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರದ ಅನುದಾನ ತಾರತಮ್ಯವನ್ನು ಖಂಡಿಸಿ ಸಂಸತ್ ನಲ್ಲಿನ ಗಾಂಧಿ ಪ್ರತಿಮೆಯ ಮುಂದೆ ಡಿಎಂಕೆ ಸಂಸದರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ತಾರತಮ್ಯ ನೀತಿ ಒಕ್ಕೂಟ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ ಎಂದು ಆಗ್ರಹಿಸಿದ ಅವರು, ಅನುದಾನ ತಾರತಮ್ಯದ ವಿರುದ್ಧ ನಿರಂತರ ಹೋರಾಟ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ.




