SUMALATHA AMBAREESH MET BJP LEADERS: ಅಂತ್ಯಗೊಳ್ಳದ ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ: ಬಿಜೆಪಿ ಮುಖಂಡರನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಷ್

ನವದೆಹಲಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಗೊಂದಲದ ನಡುವೆಯೇ ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿ ವರಿಷ್ಠರ ಭೇಟಿ ತೀವ್ರ ಕುತೂಹಲಕ್ಕೆಡೆ ಮಾಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರನ್ನು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್‌. ಸಂತೋಷ್‌ ಅವರನ್ನು ಸಂಸದೆ ಸುಮಲತಾರವರು ಅನೌಪಚಾರಿಕವಾಗಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಿದರು.

ಒಂದೆಡೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ಕಾರ್ಯವನ್ನು ನಡೆಸುತ್ತಿದ್ದಾರೆ. ಇನ್ನೊಂದೆಡೆ, ಸ್ಪರ್ಧಿಸುವುದಾದರೆ ಮಂಡ್ಯದಿಂದಲೇ ಎಂದು ಹೇಳಿರುವ ಸುಮಲತಾ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಟಿಕೆಟ್ ಗಾಗಿ ಲಾಬಿ ಆರಂಭಿಸಿದ್ದಾರೆ.


ಬಿಜೆಪಿ ಜೆಡಿಎಸ್ ಮೈತ್ರಿಯ ಟಿಕೆಟ್ ಹಂಚಿಕೆ ಪ್ರಕ್ರಿಯೆ ಮುಗಿದ ಬಳಿಕವೇ ಯಾವ ಕ್ಷೇತ್ರ ಯಾರಿಗೆ ಎನ್ನುವ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಅಲ್ಲಿಯವರೆಗೆ ಎಲ್ಲಾ ನಾಯಕರಿಗೂ, ಟಿಕೇಟ್ ಆಕಾಂಕ್ಷಿಗಳಿಗೂ ಟೆನ್ಷನ್ ಟೆನ್ಷನ್ ಶುರುವಾಗಿದೆ.

More News