BHARAT RATHNA AWARD: ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಸ್ವಾಮಿನಾಥನ್ ಅವರಿಗೆ ಭಾರತ ರತ್ನ

ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಪಿ ವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ದಿವಂಗತ ಎಂ ಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ಕೇಂದ್ರ ಸರ್ಕಾರ ಘೋಷಿಸಿದೆ.

ದೇಶಕ್ಕೆ ಸಲ್ಲಿಸಿದ ಈ ಮೂವರು ಮಹನೀಯರ ಗಣನೀಯ ಸೇವೆಯನ್ನು ಸ್ಮರಿಸಿ ದೇಶದ ಅತ್ಯುನ್ನತ ಪುರಸ್ಕಾರ ಭಾರತ ರತ್ನ ನೀಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಗೌರವ ಸಲ್ಲಿಸಿದ್ದಾರೆ.
ಕಳೆದ ವಾರವಷ್ಟೇ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ಗೌರವ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.

More News