ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳನ್ನು ಮುಗಿದೆವೆ. ಇದರಲ್ಲಿ ಉಭಯ ತಂಡಗಳು ಒಂದೊಂದು ಪಂದ್ಯಗಳನ್ನು ಜಯಿಸಿವೆ. ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ವೈಯಕ್ತಿಕ ಕಾರಣಗಳಿಂದ ಮೊದಲ ಎರಡು ಪಂದ್ಯಗಳಿಂದ ಪಂದ್ಯಗಳಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸರಣಿಯಿಂದಲೇ ದೂರ ಉಳಿದಿದ್ದಾರೆ. ಸರಣಿಯಿಂದಲೇ ಹೊರಗುಳಿಯುವ ನಿರ್ಧಾರವನ್ನು ಬಿಸಿಸಿಐಗೆ ತಿಳಿಸಿದ್ದು, ಕೊಹ್ಲಿಯ ನಿರ್ಧಾರವನ್ನು ಸಂಪೂರ್ಣವಾಗಿ ಗೌರವಿಸಲಾಗುವುದು ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಗಾಯಗೊಂಡು ದ್ವೀತಿಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಕೆ ಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಅವರು ಮತ್ತೆ ತಂಡದಲ್ಲಿ ಸ್ಥಆನ ಪಡೆದಿದ್ದಾರೆ. ಬೆನ್ನು ಮತ್ತು ತೊಡೆ ಸಂದು ಗಾಯದಿಂದ ಬಳಲುತ್ತಿರುವ ಶ್ರೇಯಸ್ ಅಯ್ಯರ್ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಭಾರತ ತಂಡ ಇಂತಿದೆ
ರೋಹಿತ್ ಶರ್ಮಾ (ನಾಯಕ), ಜಸ್ ಪ್ರೀತ್ ಬುಮ್ರಾ(ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆ ಎಲ್ ರಾಹುಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ಕೆಎಸ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಆಕಾಶ್ ದೀಪ್, ಮುಖೇಶ್ ಕುಮಾರ್, ಕುಲದೀಪ್ ಅಯ್ಯರ್, ಮೊಹಮ್ಮದ್ ಸಿರಾಜ್




