GOVERNOR’S SPEECH IS DISAPPOINTING: ಸಪ್ಪೆ, ನಿರಾಶದಾಯಕ ರಾಜ್ಯಪಾಲರ ಭಾಷಣ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸಪ್ಪೆ ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೋಧಿ ಸರ್ಕಾರ ಇರುವುದನ್ನು ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿಧ್ದೇವೆ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ‌ ಎಂದು ಆರೋಪಿಸಿದರು.
ನೀರಾವರಿಗೆ 10 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ಸಾರೆ ಎಂದು ದಾಖಲೆ ನೀಡಲಿ. ತಮ್ಮ ಬೆನ್ನು ತಾವೆ ತಟ್ಟಿಕೊಳ್ಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಕ್ಷೇತ್ರದಲ್ಲಿ ತಿರುಗಾಡದಂತಹ ಪರಿಸ್ಥಿತಿ ಇದೆ. ಅವರನ್ನು ಕೆಳಿದರೆ ಸರ್ಕಾರ ಸಾಧನೆ ಏನು ಅಂತ ಗೊತ್ತಾಗುತ್ತದೆ. ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡಿಲ್ಲ. ಡಿಸಿ ಅಕೌಂಟ್ ನಲ್ಲಿ ಹಣ ಇದೆ ಅಂತಾರೆ ಅವರು ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ರಾಜ್ಯಪಾಲರಿಂದ ಸುಳ್ಳು ಹೇಳುವ ಕೆಲಸ ಮಾಡಿದ್ದಾರೆ.
ಕೇಂದ್ರದ ಅನುದಾನದ ಕುರಿತು ಸದನದಲ್ಲಿ ಚರ್ಚೆ ಮಾಡುತ್ತೇವೆ. ಯುಪಿಎ ಅವಧಿಯಲ್ಲಿ ಎಷ್ಟು ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎನ್ನುವುದು ದಾಖಲೆ ಇದೆ. ಕೇಂದ್ರದ ಆತುಷ್ಮಾನ್ ಭಾರತ, ಜಲ ಜೀವನ್ ಮಿಷನ್ ಸೇರಿದಂತೆ ಅನೇಕ ಯೊಜನೆಗಳು ಜಾರಿಯಲ್ಲಿವೆ.
ಧರ್ಮದ ವಿಚಾರದಲ್ಲಿ ಸಂವಿಧಾನದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣಿವಂತೆ ಹೇಳಿದೆ. ಆದರೆ, ಇವರು ಒಂದೇ ಧರ್ಮವನ್ನು ತುಷ್ಟೀಕರಣ ಮಾಡುವ ಕೆಲಸ ಮಾಡುತ್ತಾರೆ.

More News

You cannot copy content of this page