ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣದ ತನಿಖಾ ವರದಿಯನ್ನು ಸದನದಲ್ಲಿ ಮಂಡನೆಗೆ ಸಚಿವ ಸಂಪುಟ ಅನುಮೋದನೆ ಪಡೆದು ಮಂಡಿಸುವ ಚಿಂತನೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತನಿಖಾ ವರದಿ ಉಭಯ ಸದನದಲ್ಲಿ ಮಂಡನೆಗೆ ಅನುಮತಿ ಪಡೆಯಲಾಗುವುದು ಎಂದು ತಿಳಿದುಬಂದಿದೆ.
ತನಿಖಾವರದಿಯನ್ನು ಸದನದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲು ತೀರ್ಮಾನಿಸಲಾಗಿದ್ದು, ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ನೇಮಕಾತಿ ಹಗರಣ ಇದಾಗಿದೆ. ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ತನಿಖಾ ಸಮಿತಿ ತನಿಖಾ ವರದಿ ಸಿದ್ದಪಡಿಸಿ, ಸರ್ಕಾರಕ್ಕೆ ಹಸ್ತಾಂತರಿಸಿದೆ.
ತನಿಖಾವರದಿ ಈಗಾಗಲೇ ಸಿಎಂಗೆ ಸಲ್ಲಿಕೆ ಮಾಡಲಾಗಿದ್ದು, ಸಂಪುಟ ಸಭೆಯಲ್ಲಿ ಸದನದಲ್ಲಿ ತನಿಖಾವರದಿ ಮಂಡಿಸಿ, ವಿಧಾನ ಮಂಡಲದಲ್ಲಿ ಮಂಡಿಸಲು ಸಂಪುಟ ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.