FIR AGAINST TWO MLA AND VHP WORKER: ಶಾಲೆ ಬಳಿ ದಾಂಧಲೆ: ಇಬ್ಬರು ಶಾಸಕರು ಮತ್ತು ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಎಫ್ ಐಅರ್ ದಾಖಲು

ಮಂಗಳೂರು : ಮಂಗಳೂರಿನ ನಗರದಲ್ಲಿನ ವೆಲೆನ್ಸಿಯಾದ ಸೆಂಟ್ ಜೆರೋಸಾ ಶಾಲೆಯ ಬಳಿ ಸೋಮವಾರ ಪ್ರತಿಭಟನೆ ನಡೆಸಿ ಜೈ ಶ್ರೀರಾಮ್ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ ಹಾಗೂ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರಲು ಬಯಸಿದ ಆರೋಪದ ಹಿನ್ನೆಲೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ. ವೈ ಭರತ್ ಶೆಟ್ಟಿ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಇವರೊಂದಿಗೆ ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯವಾಹ ಶರಣ್ ಪಂಪ್ ವೆಲ್ ಸೇರಿದಂತೆ ಇನ್ನಿತರರ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅನಿಲ್ ಲೋಬೋ ಎಂಬುವವರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಾಲಾಗಿದೆ.
ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬುವವರು ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ದೇವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಶಾಲೆಯ ಮುಂದೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರಭಾ ಅವರು ಯಾವುದೇ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ನಡೆದುಕೊಂಡಿಲ್ಲ. ಆದರೂ ಸ್ಥಳೀಯ ಶಾಸಕರು ಶಾಲೆಯ ಆಡಳಿತ ಮಂಡಳಿಯ ಚರ್ಚೆ ಮಾಡಿಲ್ಲ. ಆದರೂ ಶಾಲೆಯ ಗೇಟ್ ಎದುರು ಅಕ್ರಮವಾಗಿ ಸೇರಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಶಾಲಾ ಆಡಳಿತ ಮಂಡಳಿಯ ವಿರುದ್ಧ ಬೆದರಿಕೆ ಹಾಕಿದ್ದಾರೆ, ಹಿಂದೂ ಮತ್ತು ಕ್ರೈಸ್ತ ಧರ್ಮದ ನಡುವೆ ಗಲಭೆ ಉಂಟಾಗುವಂತೆ ಪ್ರಚೋದಿಸಿ ಮಾತನಾಡಿದ್ದಾರೆ ಎಂದು ಅನಿಲ್ ಅವರು ಪೊಲೀಸರಿಗೆ ನೀಡಿದ ಲಿಖಿತ ದೂರಿನಲ್ಲಿ ಆರೋಪಿಸಿದ್ದಾರೆ

More News

You cannot copy content of this page