I AM IN HOSPITAL FOR ONLY ROUTINE CHECK: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದ ಕಾರಣದಿಂದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ವಲ್ಪ ಉಸಿರಾಟದ ತೊಂದರೆಯಿಂದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಸಂಬಂಧ ದೇವೇಗೌಡರು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮಾಧ್ಯಮಗಳಲ್ಲಿ ಬರುವಂತಹ ವರದಿಗಳನ್ನು ಅವರು ತಳ್ಳಿಹಾಕಿದ್ದಾರೆ. ನಾನು ರೋಟೀನ್ ಚೆಕ್ ಅಪ್ ಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ನಾನು ಶೀಘ್ರದಲ್ಲಿಯೇ ಮನೆಗೆ ಹಿಂದಿರುಗುತ್ತೇನೆ. ಗಾಬರಿಯಾಗುವಂತಹ ವಿಷಯ ಏನು ಇಲ್ಲ ಎಂದು ತಿಳಿಸಿದ್ದಾರೆ.

More News