Mahadayi Project: ಮಹದಾಯಿ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೇ ಕೇಂದ್ರ ಸಹಕಾರ ಕೊಡುತ್ತಿಲ್ಲ; ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ:ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದ್ರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ಹಂಚಿ ವಿಜಯೋತ್ಸವ ಆಚರಿಸಿದರು. ಆದರೆ ಈಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ ಎಂದರು.

ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ. ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆದಿದೆ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಬಜೆಟ್ ನಂತರವೇ ನಿಗಮ-ಮಂಡಳಿಗೆ ನೇಮಕ ಮಾಡಲಾಗುವುದು. ಈ ಬಗ್ಗೆ ಯಾರೂ ಅಸಮಾಧಾನಗೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

More News