ಆಂಧ್ರಪ್ರದೇಶ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಕಾರಣದಿಂದಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಚಿತ್ರಾವತಿ ನದಿ ಉಕ್ಕಿ ಹರಿಯುತ್ತಿದೆ. ಹಾಗೆಯೇ ಹರಿಯುತ್ತಿರುವ ನೀರಿನ ರಭಸ ಹೆಚ್ಚಾಗಿದೆ.
ಈ ಸಂದರ್ಭದಲ್ಲಿ ನದಿಯ ಪ್ರವಾಹಕ್ಕೆ ಸಿಲುಕಿದ್ದ ಸುಮಾರು ಹತ್ತು ಜನರನ್ನು ಇಂಡಿಯಾನ್ ಏರ್ ಪೋರ್ಸ್ ತಂಡದಿಂದ ರಕ್ಷಿಸಲಾಗಿದೆ. ಆಂಧ್ರಪ್ರದೇಶ ಸರ್ಕಾರದಿಂದ ಮಾಹಿತಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಿಂದ ತೆರಳಿದ ಐಎಎಫ್ ಎಂಐ-17 ಹೆಲಿಕಾಪ್ಟರ್ ಅಪಾಯದಲ್ಲಿದ್ದ ಹತ್ತು ಜನರ ಜೀವ ಉಳಿಸಿದೆ.

ರಕ್ಷಣಾ ಕಾರ್ಯವನ್ನು ಸ್ಥಳೀಯ ಜನರು ಹತ್ತಿರದಲ್ಲಿಯೇ ನಿಂತು ವೀಕ್ಷಿಸಿದರು. ಹಾಗೆನೇ, ನದಿ ತಪ್ಪಲಿನಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ.






