ಬಹುಬಾಷಾ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟಿ ಶ್ರದ್ದಾ ದಾಸ್ ಅವರುಗಳು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ನಟಿ ರಶ್ಮಿಕಾ ಅವರೇ ಹೇಳಿಕೊಂಡಿದ್ದಾರೆ.
ಈ ಸಂಬಂಧ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದು ಹೇಳಿಕೊಂಡಿದ್ದು, ನಾನು ಮತ್ತು ಶ್ರದ್ದಾದಾಸ್ ಇಬ್ಬರು ಒಟ್ಟಿಗೆ ಪ್ರಯಾಣ ಬೆಳೆಸಿದ್ದೇವು, ಈ ವೇಳೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.

ಮಂಬೈಯಿಂದ ಪ್ರಯಾಣ ಬೆಳೆಸುತ್ತಿದ್ದಾಗ ವಿಮಾನ ಟೇಕ್ ಆಫ್ ಆದ ಕೂಡಲೇ ಈ ಸಮಸ್ಯೆ ಕಾಣಿಸಿಕೊಂಡಿತ್ತು. ಇಂದು ನಾವು ಹೀಗೆ ಮಾಡಿ ಪ್ರಾಣಾಪಾಯದಿಂದ ಪಾರಾಗಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ ಮಾಡಿದ್ದರಿಂದ ನಾವು ಪಾರಾಗಿದ್ದೇವೆ ಎಂದಿದ್ದಾರೆ.
ರಶ್ಮಿಕಾ ಅವರು ಬಾಲಿವುಡ್ ನಲ್ಲಿ ವಿಕ್ಕಿ ಕೌಶಲ್ ಮತ್ತು ಛಾವಾ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಹಾಗೆಯೇ ತೆಲುಗಿನ ಪುಷ್ಪ-2, ಗರ್ಲ್ ಪ್ರೆಂಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದ್ದರಿಂದ ಅವರು ಆಗಾಗ್ಗೆ ಪ್ರಯಾಣ ಬೆಳೆಸುತ್ತಿರುತ್ತಾರೆ.




