ಬೆಂಗಳೂರು : ಗಂಟಲು ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದರು. ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಅವರು ಕೂಡಲೇ ಕಾವೇರಿ ನಿವಾಸಕ್ಕೆ ಹಿಂದಿರುಗಿದರು.
ಸುಮಾರು ಮೂರು ಗಂಟೆ 15 ನಿಮಿಷ ಸುಧೀರ್ಘ ಬಜೆಟ್ ಬಾಷಣ ಮತ್ತು ಎರಡು ದಿನ ನಿರಂತರ ಜಿಲ್ಲಾ ಪ್ರವಾಸಗಳಲ್ಲಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಹೀಗಾಗಿ ಸಣ್ಣಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ಅವರು ವಿಶ್ರಾಂತಿಗಾಗಿ ನಿವಾಸಕ್ಕೆ ತೆರಳಿದ್ದು, ಮಧ್ಯಾಹ್ನದ ನಂತರ ನಡೆಯುವ ಸದನಕ್ಕೆ ಮತ್ತೆ ಹಾಜರಾಗುವ ಸಾಧ್ಯತೆಗಳಿವೆ.