ಕುತೂಹಲ ಘಟ್ಟದಲ್ಲಿ ರಾಜಸ್ಥಾನ ಕ್ಯಾಬಿನೆಟ್ : ಎಲ್ಲಾ ಸಚಿವರ ರಾಜೀನಾಮೆ ಪಡೆದ ಮುಖ್ಯಮಂತ್ರಿ ಗೆಹ್ಲೋಟ್

ರಾಜಸ್ಥಾನ: ಬಹುನಿರೀಕ್ಷಿತ ರಾಜಸ್ಥಾನ ಕ್ಯಾಬಿನೆಟ್ ಪುನಾರಚನೆಗೆ ಒಂದು ದಿನ ಮೊದಲೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಎಲ್ಲಾ ಸಚಿವರಿಂದ ರಾಜೀನಾಮೆಯನ್ನು ಪಡೆದಿದ್ದಾರೆ.
ಇಂದು ಮಧ್ಯಾಹ್ನ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮತ್ತು ಹಿರಿಯ ನಾಯಕರ ನಡುವೆ ಹಲವು ಸುತ್ತಿನ ಸಭೆಯ ಬಳಿಕ ಇಂದು ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗಧಿಯಾಗಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೈಲಟ್ ಅವರ ಬೆಂಬಲಿಗರಿಗೆ ಸಚಿವ ಸ್ಥಾನ ಸಿಗುವ ಎಲ್ಲಾ ಲಕ್ಷಣಗಳು ಕಂಡುಬಂದಿವೆ.


ನಾಳೆ ಸಂಜೆ ನಾಲ್ಕು ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನಾ ನಡೆಯುವ ಸಭೆಯಲ್ಲಿ ಎಲ್ಲಾ ಸಚಿವರ ಖಾತೆಗಳ ಕುರಿತು ಸಮಗ್ರ ಚರ್ಚೆಯಾಗಲಿದೆ.
ಈಗಾಗಲೇ ಸಚಿವ ಸ್ಥಾನಕ್ಕೆರಾಜೀನಾಮೆ ನೀಡಿರುವ ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿದೆ. ಇತ್ತೀಚಿನ ದಿನಗಳಲ್ಲಿ ನಾಯಕತ್ವಕ್ಕಾಗಿ ಅನೇಕಬಾರಿ ಸಮಸ್ಯೆಗಳು ತಲೆದೋರಿದ್ದನ್ನು ಇಲ್ಲಿ ಸ್ಮರಿಸಬಹುದು.

More News