ಬೆಂಗಳೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರವನ್ನು ಇಳಿಕೆ ಮಾಡಿ ಇಂದು ಆದೇಶ ಹೊರಡಿಸಿದ್ದು, ಇದು ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ತಂದಿದೆ. ಇದರಿಂದ ಅವರು ಕೊಂಚ ಉಸಿರಾಡುವಂತಾಗಿದೆ.
ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಬಂಪರ್ ಕೊಡುಗೆ ನೀಡಿದ್ದು, ನೂರು ಯೂನಿಟ್ ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸ್ ಯಷ್ಟು ದರವನ್ನು ಇಳಿಕೆ ಮಾಡಿ ಆದೇಶಿಸಿದೆ.


ಹಾಗೆಯೇ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದ್ದು, ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ ಗೆ 40 ಪೈಸೆ ಕಡಿಮೆ ಮಾಡಲಾಗಿದೆ.
ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಗೆ ಮಾಡಲಾಗಿದ್ದು, ಇದು ಮಾರ್ಚ್ 1 ರಿಂದ ಹೊಸ ದರ ಅನ್ವಯವಾಗಲಿದೆ ಎಂದು ಕೆಇಆರ್ ಸಿ ತಿಳಿಸಿದೆ.




