HIMACHAL PRADESH NUMBER GAME..? ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಕಸರತ್ತು: ಸ್ಪಷ್ಟ ಬಹುಮತದ ಸರ್ಕಾರದ ಆರು ಕಾಂಗ್ರೆಸ್ ಶಾಸಕರು ಬಿಜೆಪಿ ತೆಕ್ಕೆಗೆ..?

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಳೆದ ಎರಡು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಇದೀಗ ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿದೆ.
ಕಾಂಗ್ರೆಸ್ ಪಕ್ಷದ ಆರು ಶಾಸಕರು ಬಿಜೆಪಿಯ ಆಪರೇಷನ್ ಕಮಲಕ್ಕೆ ಸಿಲುಕಿ, ಬಿಜೆಪಿ ಪಾಳೇಯದಲ್ಲಿ ಗುರುತಿಸಿಕೊಂಡಿರುವುದೇ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ. ನಿನ್ನೆ ನಡೆದ ರಾಜ್ಯ ಸಭೆ ಚುನಾವಣೆಯಲ್ಲಿ ಆರು ಶಾಸಕರು ಬಿಜೆಪಿಯ ಅಭ್ಯರ್ಥಿಗೆ ಮತ ಹಾಕಿ, ತಮ್ಮ ಪಕ್ಷದ ಅಂದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದರು.
ಹಿಮಾಚಲ ಪ್ರದೇಶ ವಿಧಾನಸಭೆಯು 68 ಸ್ಥಾನಗಳ ಬಲಾಬಲವನ್ನು ಹೊಂದಿದೆ. ಸರ್ಕಾರ ರಚಿಸಲು 35 ಸ್ಥಾನಗಳ ಬಹುಮತ ಬೇಕು. ಕಳೆದ ಎರಡು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದಿಂದ ಅಧಿಕಾರದ ಗದ್ದುಗೆ ಏರಿತ್ತು.
ಬಿಜೆಪಿ 25 ಸ್ಥಾನಗಳಲ್ಲಿ ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಕಾಂಗ್ರೆಸ್ಸಿನ ಆರು ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಇದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಬಹುಮತಕ್ಕೆ ಬೇಕಾಗಿರುವ ಒಂದು ಶಾಸಕ ಸ್ಥಾನ ಇದೀಗ ಕಾಂಗ್ರೆಸ್ ಗೆ ಕಡಿಮೆಯಾಗಿದೆ.
ಮೂವರು ಪಕ್ಷೇತರರ ಜತೆ, ಇನ್ನೂ ಮೂವರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದ ಹಿಮಾಚಲ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.

More News