ಬೆಂಗಳೂರು : ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಮತದಾನದಂದು ಮತದಾನದಿಂದ ದೂರ ಉಳಿದಿದ್ದ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಬಿಜೆಪಿ ಶೋಕಾಸ್ ನೋಟಿಸ್ ನೀಡಿದೆ.

ಬಿಜೆಪಿಯ ಮುಖ್ಯ ಸಚೇತಕರು ವಿವರಣೆ ಕೇಳಿ ನೋಟಿಸ್ ನೀಡಿದ್ದಾರೆ. ಫೆಬ್ರುವರಿ 27ರಂದು ನಡೆದ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಬಿಜೆಪಿ ಪಕ್ಷ ನೀಡಿರುವ ವಿಪ್ ಅನ್ನು ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ಅವರಿಗೆ ಅಡ್ಡಮತದಾನ ಮಾಡಿದ್ದರು. ಇದರಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದರು.

2015ರಲ್ಲಿ ನಡೆದ ಆಪರೇಷನ್ ಕಮಲ ಸಂದರ್ಭದಲ್ಲಿ 15 ಶಾಸಕರ ಜತೆ ಶಿವರಾಮ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ನಿಂದ ಬಿಜೆಪಿ ತೆರಳಿದ್ದರಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಕೆಲ ತಿಂಗಳುಗಳಿಂದ ಬಿಜೆಪಿ ಪಕ್ಷದಲ್ಲಿ ನಾಯಕರ ವಿರುದ್ಧ ಅಸಮಾಧಾನ ಹೊಂದಿದ್ದರು. ಹಾಗೆಯೇ ಅವರು ಕಾಂಗ್ರೆಸ್ ಮುಖಂಡರ ಜತೆ ನಿಕಟ ಸಂಪರ್ಕ ಹೊಂದಿದ್ದರು.




