BIG RELIEF TO D K SHIVAKUMAR: ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಗೆ ಬಿಗ್ ರಿಲೀಫ್: ಇ.ಡಿ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ದೊರೆತಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ಇಂದು ರದ್ದುಗೊಳಿಸಿ ಆದೇಶಿಸಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಮಹತ್ವದ ತೀರ್ಪು ನೀಡಿದೆ. ಇದರಿಂದ ಡಿಕೆ ಶಿವಕುಮಾರ್ ಅವರು ನಿಟ್ಟಿಸಿರು ಬಿಡುವಂತಾಗಿದೆ. ಬೆಂಗಳೂರು ಸೇರಿದಂತೆ ಇತರೆಡೆ ಡಿ ಕೆ ಶಿವಕುಮಾರ್ ಅವರಿಗೆ ಸೇರಿದ ಮನೆ ಮತ್ತು ಕಚೇರಿಯ ಮೇಲೆ 2017 ಅಗಸ್ಟ್ 2 ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು.
ಈ ಸಂದರ್ಭದಲ್ಲಿ ಅವರ ನಿಕಟವರ್ತಿಗಳ ಮನೆಯಲ್ಲಿ ದೊರೆತಿದ್ದ ಹಣ ಡಿ ಕೆ ಶಿವಕುಮಾರ್ ಅವರ ಬೇನಾಮಿ ಎಂದು ಆರೋಪಿಸಿ ಸಿಬಿಐ ಅಕ್ಟೋಬರ್ 3, 2020 ರಂದು ಎಫ್ಐಆರ್ ದಾಖಲು ಮಾಡಿತ್ತು. ಈಕ್ರಿಮಿನಲ್ ಪ್ರಕರಣದಿಂದ ತಮ್ಮನ್ನು ದೋಷಮುಕ್ತರನ್ನಾಗಿ ಮಾಡಬೇಕೆಂದು ಕೋರಿ ಡಿ ಕೆ ಶಿವಕುಮಾರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಜಯ ಸಿಗದ ಹಿನ್ನೆಲೆಯಲ್ಲಿ ಡಿಕೆಶಿ ಅವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಹೈಕೋರ್ಟ್ ಆದೇಶವನ್ನು ಮಾನ್ಯ ಸುಪ್ರೀಂಕೋರ್ಟ್ ರದ್ದು ಮಾಡಿದೆ. ಈ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಅವರು ಸುಮಾರು ಮೂರು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದರು. ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರನ್ನು ಜೈಲಿನಲ್ಲಿ ಭೇಟಿ ಮಾಡಿ ಸಮಾಧಾನ ಹೇಳಿದ್ದರು.

More News

You cannot copy content of this page