BJP AIM IS DESTROY AMBEDKAR’S HOPE: ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿದೆ: ಅಂಬೇಡ್ಕರ್ ಆಶಯ ನಾಶ ಮಾಡುವುದೇ ಬಿಜೆಪಿ ಗುರಿ: ಸಂಸದರ ಹೇಳಿಕೆ ಖಂಡಿಸಿದ ಡಿಸಿಎಂ ಮತ್ತು ಸಚಿವರು

ಬೆಂಗಳೂರು : ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿಕೊಂಡಿದೆ ಎಂಬುದರ ಸ್ಯಾಂಪಲ್ ಸಿಕ್ಕಿದೆ ಎಂದು ಸಂಸದ ಅನಂತ ಕುಮಾರ ಹೆಗಡೆ ನೀಡಿರುವ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಜಿಕ ಜಾಲತಾಣದಲ್ಲಿ ಅನಂತ ಕುಮಾರ್ ಹೆಗಡೆ ವಿರುದ್ಧ ಕಿಡಿ ಕಾರಿರುವ ಅವರು, ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿದ್ದಾರೆ.

ಉಪಮುಖ್ಯಮಂತ್ರಿ ಅವರು ಅಪ್ ಲೋಡ್ ಮಾಡಿರುವ ಮಾಹಿತಿ ಹೀಗೆದೆ. ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಸಂಸದ ಅನಂತ ಕುಮಾರ ಹೆಗಡೆ ಅವರ ಹೇಳಿಕೆ ನೋಡಿದರೆ ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿಕೊಂಡಿದೆ ಎಂಬುದರ ಸ್ಯಾಂಪಲ್ ಸಿಕ್ಕಂತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ. ಕರ್ನಾಟಕದ ಮತದಾರರೇ ಎಚ್ಚರದಿಂದಿರಿ ಎಂದಿದ್ದಾರೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಸಂಸದ ಹೆಗಡೆ ಮಾತನಾಡಿದ ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎಂದು ಹೇಳಿದ್ದರು.

ಹೆಗಡೆಯನ್ನು ಪಕ್ಷದಿಂದ ವಜಾ ಮಾಡಲಿ ಮುಖ್ಯಮಂತ್ರಿ
ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡಿರುವ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು. ಹಹೆಗಡೆ ಅಭಿಪ್ರಾಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಒಪ್ಪದಿದ್ದರೆ ಅವರನ್ನು ಪಕ್ಷದಿಂದಲೇ ಕಿತ್ತುಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದು ಅವರ ವೈಯಕ್ತಿಕ ಹೇಳಿಕೆ ಅಲ್ಲ, ಬಿಜೆಪಿಯ ಕಾರ್ಯಸೂಚಿಯ ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

More News

You cannot copy content of this page