COTTON CANDY BAN- NO COLORS IN GOBI : ಕಾಟನ್ ಕ್ಯಾಂಡಿ ಬ್ಯಾನ್: ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಸುವಂತಿಲ್ಲ: ಉಲ್ಲಂಘಿಸಿದರೆ 10 ಲಕ್ಷ ದಂಡ

ಬೆಂಗಳೂರು : ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇನ್ನು ಮುಂದೆ ಕಲರ್ ಕಾಟನ್ ಕ್ಯಾಂಡಿ ರಾಜ್ಯದಲ್ಲಿ ಯಾರು ಮಾರಾಟ ಮಾಡುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಬಣ್ಣ ರಹಿತ ಕಾಟನ್ ಕ್ಯಾಂಡಿ ತಯಾರಿಕೆಗೆ ನಿರ್ಬಂಧವಿಲ್ಲ.


ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಬಿ ಮಂಚೂರಿ ಸಸ್ಯಹಾರ ಪದಾರ್ಥ, ಹೀಗಾಗಿ ಅದನ್ನು ನಿಷೇಧಿಸಲು ಸಾಧ್ಯವಿಲ್ಲ, ಆದರೆ, ಗೋಬಿಯಲ್ಲಿ ಕೃತ ಬಣ್ಣ ಅಥವಾ ಯಾವುದೇ ರೀತಿಯ ರಸಾಯನಿಕ ಬಳಸಿದ್ದಲ್ಲಿ ಹತ್ತು ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಟನ್ ಕ್ಯಾಂಡಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ತರಲು ರೋಡಮೈನ್ ಬಿಯನ್ನು ಬಳಸಲಾಗುತ್ತಿದೆ. ಇದನ್ನು ಆಹಾರದಲ್ಲಿ ಬಳಸುವುದು ನಿಷೇಧ. ಇದು ಕ್ಯಾನ್ಸರ್ ಗೆ ಕಾರಣವಾಗುವ ಅಂಶವಾಗಿದ್ದರಿಂದ ನಿಷೇಧಿಸಲಾಗುತ್ತಿದೆ ದಿನೇಶ್ ಗುಂಡೂರಾವ್ ತಿಳಿಸಿದರು.

ಗೋಬಿಮಂಚೂರಿ, ಪಾನಿಪುರಿ, ಕಬಾಬ್ ಸೇರಿ ಎಲ್ಲಾ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವುದನ್ನು ನಿಷೇಧಿಸಲಾಗಿದೆ ಎಂದು ಸಚಿವರು ವಿವರಿಸಿದರು. ಇದು ಬೀದಿ ಬದಿಯ ವ್ಯಾಪಾರಿಯಿಂದ ಹಿಡಿದು ಪಂಚತಾರ ಹೋಟೆಲ್ ಗಳಿಗೂ ಇದು ಅನ್ವಯವಾಗುತ್ತದೆ ಎಂದರು. ಒಂದು ವೇಳೆ ಇದನ್ನು ಉಲ್ಲಂಘಿಸಿದರೆ ದಂಡ ಹಾಗೂ ಜೈಲು ವಾಸ ಎರಡನ್ನು ಅನುಭವಿಸಬೇಕಾಗುತ್ತದೆ ಎಂದು ವಿವರಿಸಿದರು.
ಕೃತಕ ಬಣ್ಣ ಬಳಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ -2006ರ ನಿಮಯ 59 ರಡಿಯಲ್ಲಿ 7 ವರ್ಷಗಳಿಂದ ಹತ್ತು ಲಕ್ಷ ದಂಡ ವಿಧಿಸಬಹುದು. ಹಾಗೂ ನ್ಯಾಯಲಯದಲ್ಲಿ ಜೀವಾವಧಿ ಜೈಲು ಶಿಕ್ಷೆಗೂ ಗುರಿಯಾಗಬಹುದು ಎಂದು ಕಾನೂನಿದೆ ಎಂದರು.

More News

You cannot copy content of this page