ಬೆಂಗಳೂರು : ರಾಜ್ಯ ಸರ್ಕಾರದ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಆ ಸಚಿವರುಗಳಿಗೆ ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮ ವಹಿಸಲು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.