SEXUAL ASSAULT ON MINOR GIRL: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮಾಜಿ ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಸಹಾಯ ಕೇಳಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ(81) ಅವರ ಬಳಿ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದಡಿಯಲ್ಲಿ ಫೋಕ್ಸೋ ಕಾಯಿದೆಯಡಿ ಎಫ್ ಐ ಆರ್ ದಾಖಲಾಗಿದೆ.
ಬಾಲಕಿಯ ತಾಯಿ ನೀಡುರವ ದೂರಿನ ಮೇರೆಗೆ ಬೆಂಗಳೂರು ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಸಂಜೆ ದೂರು ದಾಖಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಫೆಬ್ರುವರಿ 2 ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಬಿ ಎಸ್ ಯಡಿಯೂರಪ್ಪ ಅವರು ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆ ಹಿಂದೆಯೇ ಮಗಳ ಮೇಲೆ ಅತ್ಯಾಚಾರವಾಗಿತ್ತು. ನ್ಯಾಯ ಕೊಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಳಿ ಹೋಗಿದ್ದೇವು. ಈ ಸಂದರ್ಭದಲ್ಲಿ ಅವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಅವರ ತಾಯಿ ನೀಡಿರುವ ದೂರಿನಲ್ಲಿ ತಿಳಿಸಿದ್ದು, ವಿಚಾರವನ್ನು ಯಾರಿಗೂ ತಿಳಿಸದಂತೆ ತಾಕೀತು ಮಾಡಿದ್ದರು, ಬಾಲಕಿ ಭಯಗೊಂಡಿದ್ದರಿಂದ ಚಡವಾಗಿ ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತಿದೆ ಎಂದು ಆಕೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

More News