ಹುಬ್ಬಳ್ಳಿ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕೂಡ ಚುನಾವಣೆ ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ ನಾಲ್ಕು ನೂರಕ್ಕೂ ಹೆಚ್ಚು ಸೀಟ್ ಗೆಲ್ಲುವ ಭರವಸೆ ಇದೆ ಎಂದರು.
ಕರ್ನಾಟಕದಲ್ಲಿ ಕನಿಷ್ಠ 25-26 ಲೋಕಸಭಾ ಕ್ಷೇತ್ರದ ಚುನಾವಣೆ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವುದು ಶತಸಿದ್ಧ ಎಂದರು ಅವರು ಭರವಸೆ ನೀಡಿದರು.
ಬಿಜೆಪಿ ಅಸಮಾಧಾನ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.




