PROTEST FOR LOKA SABHA TICKET: ಬಾಗಲಕೋಟೆ ಲೋಕಸಭೆ ಟಿಕೇಟಿಗಾಗಿ ವೀಣಾ ಕಾಶಪ್ಪನವರ್ ಬೆಂಬಲಿಗರಿಂದ ಸಿಎಂ ನಿವಾಸದ ಮುಂದೆ ಪ್ರತಿಭಟನೆ

ಬೆಂಗಳೂರು : ಈ ಬಾರಿ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ವೀಣಾ ಕಾಶಪ್ಪನವರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ವೀಣಾ ಕಾಶಪ್ಪನವರ್ ಅವರ ನೂರಾರು ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಅವರಿಗೆ ಟಿಕೆಟ್ ಕೊಟ್ಟರೆ ನಾವು, ಕಾರ್ಯಕರ್ತರು ಗೆಲ್ಲಿಸಿಕೊಂಡು ಬರುತ್ತೇವೆ, ಕಾರ್ಯಕರ್ತರ ಮಾತು ಕೇಳದೆ, ನಾಯಕರ ಮಾತು ಕೇಳಿ ಟಿಕೆಟ್ ಕೊಟ್ಟರೆ ಪರಿಣಾಮ ಎದುರಿಸಬೇಕಾಗುತ್ತದೆ, ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಜನಪರ ಕೆಲಸ ಮಾಡಿಕೊಂಡಿದ್ದಾರೆ ಎಂದು ಬೆಂಬಲಿಗರು ಒತ್ತಾಯಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಪ್ರವಾಸ ಮಾಡಿ ಐದು ಶಾಸಕ ಸ್ಥಾನ‌ ಗೆಲ್ಲಿಸಿಕೊಟ್ಟಿದ್ದಾರೆ, ಅವರು ಕ್ಷೇತ್ರದ ಮಹಿಳೆಯರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ, ಕಾರ್ಯಕರ್ತರ ಮಾತು ಬಿಟ್ಟು ಹೊರಗಿನವರಿಗೆ ಟಿಕೆಟ್ ಕೊಟ್ಟರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ವೀಣಾ ಕಾಶಪ್ಪನವರ್ ಬೆಂಬಲಿಗರು ಎಚ್ಚರಿಕೆ ನೀಡಿದರು.
ಪ್ರತಿಭಟನೆ ನಡೆಸಿದ ವೀಣಾ ಕಾಶಪ್ಪನವರ್ ಬೆಂಬಲಿಗರನ್ನ ಗೃಹ ಕಚೇರಿ ಕೃಷ್ಣಾಗೆ ಕಳುಹಿಸಿದ ಪೊಲೀಸರು, ಅಲ್ಲಿ ವೀಣಾ ಕಾಶಪ್ಪನವರ್ ಮುಖ್ಯಮಂತ್ರಿ ಅವರ ಭೇಟಿಗೆ ಅವಕಾಶ ಕಲ್ಪಿಸಿದರು. ಅದೇ ಸಂದರ್ಭದಲ್ಲಿ ಕೃಷ್ಣಾ ಹೊರಗೆ ವೀಣಾ ಕಾಶಪ್ಪನವರ್ ಬೆಂಬಲಿಗರು ಕಣ್ಣೀರು ಹಾಕಿದರು.
ಪ್ರತಿಭಟನೆ ಮಾಡುವುದಾದರೆ ಫ್ರೀಡಂ ಪಾರ್ಕ್ ಗೆ ಹೋಗಿ ಎಂದು ಪೊಲೀಸರ ಸೂಚನೆ ಮೇರೆಗೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

More News