ANSWER PM MODI: ರಾಜ್ಯದಲ್ಲಿನ ತೀವ್ರ ಬರಗಾಲ, ಕುಟುಂಬ ರಾಜಕಾರಣ ಸೇರಿದಂತೆ ಅನೇಕ ವಿಚಾರಗಳಿಗೆ ಪ್ರಧಾನಿಯಿಂದ ಉತ್ತರ ಬಯಸಿದ ಕಾಂಗ್ರೆಸ್

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕೆಲವು ಜಲ್ವಂತ ಸಮಸ್ಯೆಗಳಿಗೆ ಪ್ರಧಾನಿ ಉತ್ತರ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಮಾಜಿಕ ಜಾಲತಾಣದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದು, ಅದರಲ್ಲಿ ಮುಖ್ಯವಾಗಿ ಬರಗಾಲ. ರಾಜ್ಯದಲ್ಲಿ 236 ತಾಲೂಕುಗಳಲ್ಲಿ 223 ತಾಲೂಕುಗಳು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಮೋದಿ ಸರ್ಕಾರ ಕರ್ನಾಟಕ ಜನರಿಗೆ ನೆರವು ನೀಡಲು ನಿರಾಕರಿಸುತ್ತಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಮಾನವ ಕೂಲಿಯನ್ನು 100 ದಿನಗಳಿಂದ 150 ದಿನಗಳಿಗೆ ಏರಿಕೆ ಮಾಡಲು ಮನವಿ ಮಾಡಲಾಗಿದೆ. ಇದನ್ನೂ ಮಾಡಲು ಮೋದಿ ಸರ್ಕಾರ ವಿಫಲವಾಗಿದೆ ಸೇರಿದಂತೆ ಅನೇಕ ಪ್ರಶ್ನೆಗಳನ್ನು ಕೇಳಿದೆ.
ಅವರ ಟ್ವೀಟ್ ನ ಸಂಪೂರ್ಣ ವಿವರ ಇಲ್ಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿನ ಕೆಲವು ಪ್ರಮುಖ ವಿಚಾರಗಳ ಬಗ್ಗೆ ಅವರು ಉತ್ತರಿಸುವ ನಿರೀಕ್ಷೆಯಲ್ಲಿದ್ದೇವೆ;

  1. ಕರ್ನಾಟಕ ರಾಜ್ಯದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ರಾಜ್ಯದ ಬಹುತೇಕ ಭಾಗ ಬರಪೀಡಿತವಾಗಿವೆ. 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ 18,172 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿದೆ. ಮೋದಿ ಸರ್ಕಾರ ಕರ್ನಾಟಕದ ಜನರಿಗೆ ನೆರವು ನೀಡಲು ನಿರಾಕರಿಸಿರುವುದೇಕೆ?
  2. ಬರ ಪೀಡಿತ ಗ್ರಾಮೀಣ ಪ್ರದೇಶದ ಆರ್ಥಿಕತೆ ಸುಧಾರಿಸಲು ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಏರಿಕೆ ಮಾಡಲು ಮನವಿ ಮಾಡಿದೆ. ಬರ ಪೀಡಿತ ಪ್ರದೇಶಗಳಲ್ಲಿ ಈ ಏರಿಕೆ ಮಾಡಲು ಕೂನೂನಿನಲ್ಲಿ ಅವಕಾಶವಿದೆ. ಆದರೂ ಇದನ್ನು ಹೆಚ್ಚಿಸಲು ಮೋದಿ ಸರ್ಕಾರ ವಿಫಲವಾಗಿದೆ. ಇದರ ಜೊತೆಗೆ ನರೇಗಾ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ನೀಡುವ ವೇತನದ 1600 ಕೋಟಿ ಹಣವನ್ನು ಬಿಡುಗಡೆ ಮಾಡಲು ಮೋದಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಮೋದಿ ಸರ್ಕಾರ ನರೇಗಾ ಕಾರ್ಮಿಕರ ಕೂಲಿ ಯಾವಾಗ ಬಿಡುಗಡೆ ಮಾಡಲಿದೆ?
  3. ಕರ್ನಾಟಕದಲ್ಲಿ 2023ರಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಮೂಲಕ ಬಡವರಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಮುಂದಾಗಿದ್ದು, ಮೋದಿ ಸರ್ಕಾರ ಇದಕ್ಕೆ ಅಡ್ಡಿಪಡಿಸುತ್ತಿದೆ. ಆರಂಭದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರತಿ ಕೆ.ಜಿ ಅಕ್ಕಿಗೆ ₹34 ನಂತೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಮಾರಾಟ ಮಾಡಲು ಭಾರತೀಯ ಆಹಾರ ಪ್ರಾಧಿಕಾರ ಒಪ್ಪಿಗೆ ನೀಡಿತ್ತು. ನಂತರ ಅದನ್ನು ನಿರಾಕರಿಸಿತು. 2023ರ ನವೆಂಬರ್ ನಲ್ಲಿ ಆಹಾರ ಪ್ರಾಧಿಕಾರದ ದಾಸ್ತಾನಿನಲ್ಲಿ ದುಪ್ಪಟ್ಟು ಪ್ರಮಾಣದ ಅಕ್ಕಿ ಶೇಖರಣೆ ಇದ್ದು, ಕರ್ನಾಟಕ ರಾಜ್ಯಕ್ಕೆ ಅಕ್ಕಿ ನೀಡದೇ ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಲಾಗಿದೆ. ಕೇಂದ್ರ ಸರ್ಕಾರ ದ್ವೇಷ ರಾಜಕೀಯಕ್ಕಾಗಿ ಕರ್ನಾಟಕ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿಯನ್ನು ಮಾರಾಟ ಮಾಡಲು ನಿರಾಕರಿಸಿದೆಯೆ?
  4. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಅವರು ಸಂಸದರಾಗಿದ್ದು, ಮತ್ತೊಬ್ಬ ಪುತ್ರ ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಪ್ರಧಾನಮಂತ್ರಿಗಳು ಶಿವಮೊಗ್ಗದಲ್ಲಿ ಇರುವ ಕಾರಣ ಕುಟುಂಬ ರಾಜಕಾರಣ ವಿಚಾರದಲ್ಲಿ ಬಿಜೆಪಿಯ ನಿಲುವೇನು? ಎಂದು ಪ್ರಶ್ನಿಸಿದೆ.

More News

You cannot copy content of this page