ಚೆನ್ನೈ : ತಮಿಳು ಚಿತ್ರ ರಂಗದ ಖ್ಯಾತ ನಟಿ ಆರುಂಧತಿ ನಾಯರ್ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿಯನ್ನು ನಟಿಯ ಸಹೋದರಿ ಆರತಿ ನಾಯರ್ ಖಚಿತಪಡಿಸಿದ್ದು, ಆರುಂಧತಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆ ದಾಖಲಾಗಿದ್ದಾರೆ. ಅವರು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ಬಂದಿರುವ ಸುದ್ದಿ ಸತ್ಯವಾಗಿದ್ದು, ಆರುಂಧತಿ ನಾಯರ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆರತಿ ನಾಯರ್ ತಿಳಿಸಿದ್ದಾರೆ.
ಚೆನ್ನೈ- ಕೋವಲಂ ಬೈಪಾಸ್ ರಸ್ತೆಯಲ್ಲಿ ಕಳೆದ ಮಾರ್ಚ್14ರಂದು ಸಹೋದರನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಡೆದ ಅಫಘಾಕದಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಿನಿಂದ ಅಪಘಾತದ ಸುದ್ದಿಯ ಬಗ್ಗೆ ನಟಿಯ ಕುಟುಂಬದವರು ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ಅವರ ಸಹೋದರಿ ಅಪಘಾತದ ವರದಿಯನ್ನು ದೃಢೀಕರಿಸಿದ್ದಾರೆ.