ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮೇಕೆದಾಟು ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ಹೇಳಿದ್ದ ಕಾಂಗ್ರೆಸ್ ಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ, ಅದರ ಜತೆಗೆ ಇಂಡಿಯಾ ಮೈತ್ರಿಕೂಟದ ಡಿಎಂಕೆ ಕೂಡ ಮೇಕೆದಾಟು ಯೋಜನೆಯನ್ನು ಜಾರಿ ಮ್ಾಡಲು ಬಿಡುವುದಿಲ್ಲ ಎಂದು ಘೋಷಿಸಿದೆ.
ಡಿಎಂಕೆ ತಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಜಾರಿಗೆ ಬಿಡುವುದಿಲ್ಲ ಎಂದು ಸ್ಪಷ್ಟಲವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಯೋಜನೆ ನೆನೆಗುದಿಗೆ ಬಿದ್ದಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು ಪ್ರತಿಪಕ್ಷದ ನಾಯಕ ಆರ್ ಅಶೋಕ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ @DKShivakumar ಅವರೇ, ಈಗ 'ನಮ್ಮ ನೀರು, ನಮ್ಮ ಹಕ್ಕು' ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ @RahulGandhi ಅವರನ್ನು… pic.twitter.com/OOT1aSOZOh
— R. Ashoka (ಮೋದಿ ಅವರ ಕುಟುಂಬ) (@RAshokaBJP) March 21, 2024
ಸಾಮಾಜಿಕ ಜಾಲತಾಣದಲ್ಲಿ ಅವರು ಟೀಕೆ ಮಾಡಿರುವ ಸಂಪೂರ್ಣ ವಿವರ ಇಲ್ಲಿದೆ.
ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ @DKShivakumar ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ @RahulGandhi ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ?
ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ @INCKarnataka ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಅದೇ ರೀತಿಯಲ್ಲಿ ತಮ್ಮದೇ ಪಕ್ಷ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದು, ಅಲ್ಲಿಯ ನಾಯಕರ ಮೇಲೆ ಪ್ರತಿಪಕ್ಷ ಬಿಜೆಪಿ ಒತ್ತಡ ಹೇರಿ ಯೋಜನೆ ಜಾರಿಗೆ ಮುಂದಾದರೆ, ಬೆಂಗಳೂರು ನಗರದಲ್ಲಿನ ಕುಡಿಯುವ ನೀಡಿನ ಸಮಸ್ಯೆ ಬಗೆಹರಿಯಲಿದೆ ಎನ್ನುವುದು ಪ್ರತಿಪಕ್ಷ ಕಾಂಗ್ರೆಸ್ ಮುಖಂಡರ ವಾದವಾಗಿದೆ.